ಪಂಜಾಬ್‌ನಲ್ಲಿ ಬಂದೂಕು ಸಂಸ್ಕೃತಿಯನ್ನು ಉತ್ತೇಜಿಸುವ ಶಸ್ತ್ರಾಸ್ತ್ರಗಳು ಮತ್ತು ಹಾಡುಗಳಿಗೆ ನಿಷೇಧ!
ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ವಿರೋಧ ಪಕ್ಷಗಳ ಟೀಕೆಗಳ ನಡುವೆಯೇ ಪಂಜಾಬ್ ಸರ್ಕಾರ ಭಾನುವಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ.
Published: 13th November 2022 07:38 PM | Last Updated: 13th November 2022 07:38 PM | A+A A-

ಭಗವಂತ ಮಾನ್
ಚಂಡೀಗಢ: ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ವಿರೋಧ ಪಕ್ಷಗಳ ಟೀಕೆಗಳ ನಡುವೆಯೇ ಪಂಜಾಬ್ ಸರ್ಕಾರ ಭಾನುವಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ.
ಗನ್ ಸಂಸ್ಕೃತಿ ಮತ್ತು ಹಿಂಸೆಯನ್ನು ಉತ್ತೇಜಿಸುವ ಬಂದೂಕುಗಳು ಮತ್ತು ಹಾಡುಗಳ ಸಾರ್ವಜನಿಕ ಪ್ರದರ್ಶನಕ್ಕೆ ನಿಷೇಧ ಹೇರಿದೆ. ಅಧಿಕೃತ ಆದೇಶದ ಪ್ರಕಾರ, ರಾಜ್ಯ ಸರ್ಕಾರವು ಮುಂದಿನ ಮೂರು ತಿಂಗಳಲ್ಲಿ ಶಸ್ತ್ರಾಸ್ತ್ರ ಪರವಾನಗಿಗಳ ಮರುಪರಿಶೀಲನೆಗೆ ಆದೇಶಿಸಿದೆ. ಯಾವುದೇ ಸಮುದಾಯದ ವಿರುದ್ಧ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಸ್ಥಳಗಳು, ಮದುವೆ ಸಮಾರಂಭಗಳು ಮತ್ತು ಇತರ ಕಾರ್ಯಕ್ರಮಗಳಲ್ಲಿ ಆಯುಧಗಳನ್ನು ಒಯ್ಯುವುದು ಮತ್ತು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಶಸ್ತ್ರಾಸ್ತ್ರ ಪರವಾನಗಿಯನ್ನು ಮೂರು ತಿಂಗಳೊಳಗೆ ಪರಿಶೀಲಿಸಬೇಕು ಮತ್ತು ಯಾವುದೇ ತಪ್ಪು ವ್ಯಕ್ತಿಗೆ ಶಸ್ತ್ರಾಸ್ತ್ರ ಪರವಾನಗಿ ನೀಡಿದ್ದರೆ, ಅದನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ವಿವಿಧೆಡೆ ದಿಢೀರ್ ತಪಾಸಣೆ ನಡೆಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಪಂಜಾಬ್: ಡೇರಾ ಸಚ್ಚಾ ಸೌದಾ ಅನುಯಾಯಿ ಹತ್ಯೆ; ಮೂವರು ಶೂಟರ್‌ಗಳ ಬಂಧನ!
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಆರೋಪದ ಮೇಲೆ ಎಎಪಿ ಸರ್ಕಾರ ವಿರೋಧ ಪಕ್ಷಗಳಿಂದ ಟೀಕೆಗಳನ್ನು ಎದುರಿಸುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ಎರಡು ಪ್ರಮುಖ ಘಟನೆಗಳು ನಡೆದಿತ್ತು. ನವೆಂಬರ್ 4 ರಂದು, ಶಿವಸೇನೆಯ (ತಕ್ಸಲಿ) ನಾಯಕ ಸುಧೀರ್ ಸೂರಿ ಮತ್ತು ಡೇರಾ ಸಚ್ಚಾ ಸೌಧದ ಅನುಯಾಯಿ ಪ್ರದೀಪ್ ಸಿಂಗ್ ನವೆಂಬರ್ 10ರಂದು ಹತ್ಯೆ ಮಾಡಲಾಗಿತ್ತು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದು ರಾಜ್ಯ ಗೃಹ ಇಲಾಖೆ ಪೊಲೀಸ್ ಮುಖ್ಯಸ್ಥರು, ಪೊಲೀಸ್ ಆಯುಕ್ತರು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದೆ.