ಹೈದರಾಬಾದ್ ಹಾಸ್ಟೆಲ್ ರ್ಯಾಗಿಂಗ್, ಹಲ್ಲೆ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ 8 ಮಂದಿ ವಶಕ್ಕೆ ಪಡೆದ ಪೊಲೀಸರು

ತೆಲಂಗಾಣದ ಹೈದರಾಬಾದ್‌ನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕಾನೂನು ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿ ಧರ್ಮದ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಪ್ರಾಪ್ತ ಬಾಲಕ ಸೇರಿ 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸುತ್ತಿರುವುದು.
ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸುತ್ತಿರುವುದು.

ಹೈದರಾಬಾದ್: ತೆಲಂಗಾಣದ ಹೈದರಾಬಾದ್‌ನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕಾನೂನು ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿ ಧರ್ಮದ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಪ್ರಾಪ್ತ ಬಾಲಕ ಸೇರಿ 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಘಟನೆಯಲ್ಲಿ ಸಂತ್ರಸ್ತ ವಿದ್ಯಾರ್ಥಿಯನ್ನು ಹಿಮಾಂಕ್ ಬನ್ಸಾಲ್ ಎಂದು ಗುರುತಿಸಲಾಗಿದೆ. ಸಂತ್ರಸ್ತ ವಿದ್ಯಾರ್ಥಿ ಹೈದರಾಬಾದ್‌ನ ಐಎಫ್‌ಎಚ್‌ಇ ಸಂಸ್ಥೆಯಲ್ಲಿ ಪದವಿಪೂರ್ವ ಕಾನೂನು ಪದವಿ ಪಡೆಯುತ್ತಿದ್ದರೆಂದು ವರದಿಗಳು ತಿಳಿಸಿವೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸೈಬರಾಬಾದ್ ಪೊಲೀಸರು ಕ್ರಮ ಕೈಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ 8 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳ ವಿರುದ್ಧ  307 (ಕೊಲೆ ಯತ್ನ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ್ದಕ್ಕಾಗಿ ಶಿಕ್ಷೆ), 342 (ಅಕ್ರಮ ಬಂಧನಕ್ಕೆ ಶಿಕ್ಷೆ), 450 (ಯಾವುದೇ ಅಪರಾಧವನ್ನು ಮಾಡುವ ಸಲುವಾಗಿ ಮನೆ-ಅತಿಕ್ರಮಣ ಮಾಡಿದವರು), 506 (ಅಕ್ರಮ) ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), 149 (ಸಾಮಾನ್ಯ ವಸ್ತುವಿನ ವಿಚಾರಣೆಯಲ್ಲಿ ಅಪರಾಧದ ಕಾನೂನುಬಾಹಿರ ಸಭೆಯ ಪ್ರತಿಯೊಬ್ಬ ಸದಸ್ಯರು ತಪ್ಪಿತಸ್ಥರು) ಭಾರತೀಯ ದಂಡ ಸಂಹಿತೆ (IPC) ಮತ್ತು ಸೆಕ್ಷನ್ 4(I),(II), ಮತ್ತು (III) ನಿಷೇಧ 2011 ರ ರೈಸಿಂಗ್ ಆಕ್ಟ್ ಸೇರಿದಂತೆ ಅನೇಕ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಮತ್ತಷ್ಟು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ನವೆಂಬರ್ 1 ರಂದು ಹಿಮಾಂಕ್ ಪ್ರಾಫೆಟ್‌ ಮೊಹಮ್ಮದ್‌ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಮಾಡಿದ ನಂತರ ಈ ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಪೊಲೀಸರಿಗೆ ದೂರು ನೀಡಿದ್ದ ವಿದ್ಯಾರ್ಥಿ ತನ್ನ ಮೇಲೆ ದೈಹಿಕವಾಗಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com