ಗುಜರಾತ್ ಚುನಾವಣೆ: ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷಕ್ಕೆ ಎನ್‌ಸಿಪಿ ಶಾಸಕ ಕಂಧಲ್ ಜಡೇಜಾ ರಾಜೀನಾಮೆ

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಏಕೈಕ ಗುಜರಾತ್ ಶಾಸಕ ಕಂಧಲ್ ಜಡೇಜಾ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕಂಧಲ್ ಜಡೇಜಾ
ಕಂಧಲ್ ಜಡೇಜಾ

ಪೋರ್‌ಬಂದರ್: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಏಕೈಕ ಗುಜರಾತ್ ಶಾಸಕ ಕಂಧಲ್ ಜಡೇಜಾ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದಿಂದ ಒಪ್ಪಿಗೆ ಇಲ್ಲದಿದ್ದರೂ ಜಡೇಜಾ ನವೆಂಬರ್ 11 ರಂದು ನೂರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ್ದರು.

2012 ಮತ್ತು 2017 ರಲ್ಲಿ ಪೋರಬಂದರ್ ಜಿಲ್ಲೆಯ ಕುಟಿಯಾನಾ ಕ್ಷೇತ್ರದಿಂದ ಎನ್‌ಸಿಪಿ ಟಿಕೆಟ್‌ನಲ್ಲಿ ಗೆದ್ದಿದ್ದರು. ಆದರೆ, ಈ ಬಾರಿ ಈ ಸ್ಥಾನವನ್ನು ಕಾಂಗ್ರೆಸ್-ಎನ್‌ಸಿಪಿ ಮೈತ್ರಿಯಿಂದ ಹೊರಗಿಡಲಾಗಿದೆ.

182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಕುಟಿಯಾನ ಸೇರಿದಂತೆ 89 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಉಳಿದ 93 ಸ್ಥಾನಗಳಿಗೆ ಡಿಸೆಂಬರ್ 5ರಂದು ಮತದಾನ ನಡೆಯಲಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ, ಎನ್‌ಸಿಪಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳದ ಕಾರಣ ಜಡೇಜಾ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ಅಭ್ಯರ್ಥಿಗಳನ್ನು ಸೋಲಿಸಿದ್ದರು.

ಸೋಮವಾರ ಗುಜರಾತ್ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಟೇಲ್ (ಬೋಸ್ಕಿ) ಅವರಿಗೆ ಪತ್ರ ಬರೆದಿರುವ ಜಡೇಜಾ, ಈ ಬಾರಿ ಟಿಕೆಟ್ ನಿರಾಕರಿಸಿದ ಕಾರಣ ಪಕ್ಷದ ಎಲ್ಲಾ ಹುದ್ದೆಗಳು ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ನವೆಂಬರ್ 11 ರಂದು ಎನ್‌ಸಿಪಿ ಮತ್ತು ಕಾಂಗ್ರೆಸ್ ಗುಜರಾತ್‌ನಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ. ಅದರ ಭಾಗವಾಗಿ ಶರದ್ ಪವಾರ್ ನೇತೃತ್ವದ ಪಕ್ಷವು ಮೂರು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಅವುಗಳೆಂದರೆ, ಆನಂದ್ ಜಿಲ್ಲೆಯ ಉಮ್ರೆತ್, ಅಹಮದಾಬಾದ್‌ನ ನರೋಡಾ ಮತ್ತು ದಾಹೋದ್ ಜಿಲ್ಲೆಯ ದೇವಗಢ್ ಬರಿಯಾದಲ್ಲಿ ಎನ್‌ಸಿಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.

ಅದೇ ದಿನ, ಕುಟಿಯಾನಾ ಕ್ಷೇತ್ರಕ್ಕೆ ಜಡೇಜಾ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಿದ್ದರು ಮತ್ತು ಇದಕ್ಕಾಗಿ ಎನ್‌ಸಿಪಿಯ ರಾಷ್ಟ್ರೀಯ ಉಪಾಧ್ಯಕ್ಷ ಪ್ರಫುಲ್ ಪಟೇಲ್ ಅವರಿಂದ ಅನುಮತಿ ಪಡೆದಿರುವುದಾಗಿ ಹೇಳಿಕೊಂಡಿದ್ದರು. ನಂತರ ಪಕ್ಷದ ಒಪ್ಪಿಗೆ ಸಿಗಲಿದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದರು.

ಈ ಕ್ಷೇತ್ರವು ಮೈತ್ರಿಕೂಟದ ಭಾಗವಾಗದ ಕಾರಣ, ಕುಟಿಯಾನ ಕ್ಷೇತ್ರದಿಂದ ನಾಥ ಒಡೆಯರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು.

ಡಿಸೆಂಬರ್ 1 ರಂದು ನಡೆಯಲಿರುವ ರಾಜ್ಯ ಚುನಾವಣೆಯ ಮೊದಲ ಹಂತದ ಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುವುದರಿಂದ ಜಡೇಜಾ ಈಗ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸಬಹುದು ಅಥವಾ ಬೇರೆ ಪಕ್ಷದಿಂದ ಸ್ಪರ್ಧಿಸಬಹುದು ಎಂಬು ಊಹಾಪೋಹಗಳು ದಟ್ಟವಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com