ನಮ್ಮ ಬಾಕಿ ಪಾವತಿಸದಿದ್ದರೆ ಕೇಂದ್ರ ಜಿಎಸ್‌ಟಿ ರದ್ದುಗೊಳಿಸಬೇಕು: ಮಮತಾ ಬ್ಯಾನರ್ಜಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ರಾಜ್ಯಕ್ಕೆ ನೀಡಬೇಕಾದ ಜಿಎಸ್ ಟಿ ಪಾಲನ್ನು ಪಾವತಿಸದಿದ್ದರೆ ಜಿಎಸ್ ಟಿಯನ್ನು ತೆಗೆದುಹಾಕಬೇಕು ಎಂದು...
ಸಿಎಂ ಮಮತಾ ಬ್ಯಾನರ್ಜಿ
ಸಿಎಂ ಮಮತಾ ಬ್ಯಾನರ್ಜಿ

ಜಾರ್‌ಗ್ರಾಮ್: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ರಾಜ್ಯಕ್ಕೆ ನೀಡಬೇಕಾದ ಜಿಎಸ್ ಟಿ ಪಾಲನ್ನು ಪಾವತಿಸದಿದ್ದರೆ ಜಿಎಸ್ ಟಿಯನ್ನು ತೆಗೆದುಹಾಕಬೇಕು ಎಂದು ಮಂಗಳವಾರ ಒತ್ತಾಯಿಸಿದ್ದಾರೆ.

ಜಾರ್ಗ್ರಾಮ್ ಜಿಲ್ಲೆಯ ಬುಡಕಟ್ಟು ಪ್ರಾಬಲ್ಯದ ಬೆಲ್ಪಹಾರಿ ಪ್ರದೇಶದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ, ರಾಜ್ಯ ಸರ್ಕಾರಕ್ಕೆ ಬರಬೇಕಿರುವ ಜಿಎಸ್ ಟಿ ಪಾಲು ಪಡೆಯಲು ನಾವು ಕೇಂದ್ರ ಸರ್ಕಾರದ ಮುಂದೆ "ಭಿಕ್ಷೆ ಬೇಡಬೇಕೇ"? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಿಎಸ್ ಟಿ ಬಾಕಿ ಪಾವತಿ ಮಾಡಬೇಕು ಇಲ್ಲವೆ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ.

"ಕೇಂದ್ರ ಸರ್ಕಾರ ನರೇಗಾ ಯೋಜನೆಯಡಿ ಹಣವನ್ನು ಬಿಡುಗಡೆ ಮಾಡುತ್ತಿಲ್ಲ, ನಮ್ಮ ಬಾಕಿಯನ್ನು ಪಾವತಿಸದಿದ್ದರೆ ಬಿಜೆಪಿಯು ಅಧಿಕಾರದಿಂದ ಕೆಳಗಿಳಿಯಬೇಕು. ಕೇಂದ್ರ ರಾಜ್ಯದ ಬಾಕಿಯನ್ನು ಪಾವತಿಸಲು ಸಾಧ್ಯವಾಗದಿದ್ದರೆ ಜಿಎಸ್ ಟಿಯನ್ನು ರದ್ದುಗೊಳಿಸಬೇಕು ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com