ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವಲೀನ್ ಫರ್ನಾಂಡೀಸ್ ಗೆ ದೆಹಲಿ ಕೋರ್ಟ್ ನಿಂದ ಜಾಮೀನು

ಬಾಲಿವುಡ್ ನಟಿ ಜಾಕ್ವಲೀನ್ ಫರ್ನಾಂಡೀಸ್ ಗೆ ದೆಹಲಿ ಕೋರ್ಟ್ 200 ಕೋಟಿ ರೂಪಾಯಿ ಮೊತ್ತದ ಅಕ್ರಮ ಹಣ ವರ್ಗಾವಣೆ ಪ್ರಲರಣದಲ್ಲಿ ಜಾಮೀನು ಮಂಜೂರು ಮಾಡಿದೆ. 
ನಟಿ ಜಾಕ್ವಲೀನ್ ಫರ್ನಾಂಡೀಸ್
ನಟಿ ಜಾಕ್ವಲೀನ್ ಫರ್ನಾಂಡೀಸ್

ನವದೆಹಲಿ: ಬಾಲಿವುಡ್ ನಟಿ ಜಾಕ್ವಲೀನ್ ಫರ್ನಾಂಡೀಸ್ ಗೆ ದೆಹಲಿ ಕೋರ್ಟ್ 200 ಕೋಟಿ ರೂಪಾಯಿ ಮೊತ್ತದ ಅಕ್ರಮ ಹಣ ವರ್ಗಾವಣೆ ಪ್ರಲರಣದಲ್ಲಿ ಜಾಮೀನು ಮಂಜೂರು ಮಾಡಿದೆ. 

ಈ ಪ್ರಕರಣದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್ ಸಹ ಭಾಗಿಯಾಗಿದ್ದಾರೆ.  ನ.11 ರಂದು ಜಾರಿ ನಿರ್ದೇಶನಾಲಯ ಕೋರ್ಟ್ ನಲ್ಲಿ ವಾದ ಮಂಡಿಸಿ ಜಾಕ್ವಲೀನ್ ಫರ್ನಾಂಡೀಸ್ ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ ಎಂದು ಹೇಳಿತ್ತು.
 
ಇದಕ್ಕೆ ಪ್ರತಿಯಾಗಿ, ಎಲ್ಒಸಿಯನ್ನು ನೀಡಿದ ಹೊರತಾಗಿಯೂ ತನಿಖೆ ವೇಳೆ ಜಾರಿ ನಿರ್ದೇಶನಾಲಯ ಏಕೆ ಜಾಕ್ವಲೀನ್ ಫರ್ನಾಂಡೀಸ್ ಅವರನ್ನು ಬಂಧಿಸಿಲ್ಲ? ಎಂದು ಕೋರ್ಟ್ ಪ್ರಶ್ನಿಸಿತ್ತು. ಬೇರೆ ಆರೋಪಿಗಳು ಜೈಲಿನಲ್ಲಿದ್ದಾರೆ. ಯಾಕೆ ಆಯ್ಕೆ ಮಾಡಿಕೊಳ್ಳುವ ನೀತಿ ಅನುಸರಿಸುತ್ತಿದ್ದೀರ? ಎಂದು ಕೋರ್ಟ್ ತನಿಖಾ ಸಂಸ್ಥೆಯನ್ನು ಪ್ರಶ್ನಿಸಿದೆ. 

ತನಿಖೆ ಪೂರ್ಣಗೊಂಡಿದ್ದು, ಆರೋಪಪಟ್ಟಿ ದಾಖಲಾಗಿರುವ ಹಿನ್ನೆಲೆಯಲ್ಲಿ ತಮ್ಮನ್ನು ಕಸ್ಟಡಿಗೆ ಪಡೆಯುವ ಅಗತ್ಯವಿಲ್ಲ ಎಂಬ ಆಧಾರದಲ್ಲಿ ಜಾಮೀನು ನೀಡುವುದಕ್ಕೆ ಆರೋಪಿ ಮನವಿ ಮಾಡಿದ್ದರು. ಸೆ.26 ರಂದು ಕೋರ್ಟ್ ಜಾಕ್ವಲೀನ್ ಫರ್ನಾಂಡೀಸ್ ಗೆ 50,000 ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ನೀಡಲು ಸೂಚಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. 

ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಪೂರಕ ಚಾರ್ಜ್ ಶೀಟ್ ನ್ನು ಪರಿಗಣಿಸಿದ್ದ ಕೋರ್ಟ್, ಜಾಕ್ವಲೀನ್ ಫರ್ನಾಂಡೀಸ್ ಅವರನ್ನು ಕೋರ್ಟ್ ಎದುರು ಹಾಜರಾಗುವಂತೆ ಸೂಚಿಸಿತ್ತು. ಜಾರಿ ನಿರ್ದೇಶನಾಲಯದಿಂದ ಹಲವು ಬಾರಿ ತನಿಖೆಗೆ ಹಾಜರಾಗಲು ಸಮನ್ಸ್ ಪಡೆದಿದ್ದ ಫರ್ನಾಂಡೀಸ್ ವಿರುದ್ಧ ಪೂರಕ ಆರೋಪ ಪಟ್ಟಿಯಲ್ಲಿ ಮೊದಲ ಬಾರಿಗೆ ಉಲ್ಲೇಖಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com