ಸಾವರ್ಕರ್ ವಿರುದ್ಧದ ಹೇಳಿಕೆಯಿಂದ ರಾಹುಲ್ ಗಾಂಧಿಗೆ ಸಂಕಷ್ಟ: ದೂರು ದಾಖಲಿಸಲು ಮೊಮ್ಮಗ ರಂಜಿತ್ ಸಾರ್ವಕರ್ ಮುಂದು!
ವೀರ್ ಸಾವರ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ನೀಡುವುದಾಗಿ ಸಾರ್ವಕರ್ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.
Published: 17th November 2022 03:21 PM | Last Updated: 19th December 2022 11:48 AM | A+A A-

ರಾಹುಲ್ ಗಾಂಧಿ-ಸಾವರ್ಕರ್
ಮುಂಬೈ: ವೀರ್ ಸಾವರ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ನೀಡುವುದಾಗಿ ಸಾರ್ವಕರ್ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.
ರಾಹುಲ್ ಗಾಂಧಿ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು ಪದೇ ಪದೇ ಅವಮಾನಿಸುತ್ತಿದ್ದು ಹೀಗಾಗಿ ರಾಹುಲ್ ಗಾಂಧಿ ವಿರುದ್ಧ ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ರಂಜಿತ್ ಸಾರ್ವಕರ್ ಹೇಳಿದ್ದಾರೆ.
ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ನಾಯಕರು ಸಾವರ್ಕರ್ ಅವರನ್ನು ಅಮಾನಿಸುತ್ತಿದ್ದಾರೆ. ಇದನ್ನೇ ತಮ್ಮ ಅಜೆಂಡವಾಗಿ ಮಾಡಿಕೊಂಡಿದ್ದಾರೆ ಎಂದು ರಂಜಿತ್ ಸಾರ್ವಕರ್ ಹೇಳಿದ್ದಾರೆ.
ರಾಹುಲ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಉದ್ಧವ್ ಠಾಕ್ರೆ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕಾಂಗ್ರೆಸ್ ನಾಯಕರ ಹೇಳಿಕೆಗಳಿಂದ ಅಂತರಕಾಯ್ದುಕೊಂಡಿದ್ದಾರೆ. ವಿಡಿ ಸಾವರ್ಕರ್ ಅವರ ಬಗ್ಗೆ ತಮ್ಮ ಪಕ್ಷಕ್ಕೆ ಅಪಾರ ಗೌರವವಿದೆ. ಸ್ವಾತಂತ್ರ್ಯ ಹೋರಾಟಗಾರನ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಒಪ್ಪುವುದಿಲ್ಲ ಎಂದು ಉದ್ಧವ್ ಹೇಳಿದರು. ಸ್ವಾತಂತ್ರ್ಯ ವೀರ ಸಾವರ್ಕರ್ ಬಗ್ಗೆ ನಮಗೆ ಅಪಾರ ಗೌರವ ಮತ್ತು ನಂಬಿಕೆ ಇದೆ. ಇದನ್ನು ಅಳಿಸಲು ಸಾಧ್ಯವಿಲ್ಲ ಎಂದರು.
ಸಾವರ್ಕರ್ ವಿರುದ್ಧದ ಹೇಳಿಕೆ ಸಹಿಸಲ್ಲ
ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ವಿರುದ್ಧದ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕಿಡಿಕಾರಿದ್ದಾರೆ. ಹಿಂದುತ್ವ ಸಿದ್ಧಾಂತವನ್ನು ಅವಮಾನಿಸುವ ಯಾವುದೇ ಅವಮಾನವನ್ನು ರಾಜ್ಯದ ಜನರು ಸಹಿಸುವುದಿಲ್ಲ. ಹೀಗಾಗಿ ಎಚ್ಚರಿಕೆಯಿಂದ ಮಾತನಾಡುವಂತೆ ಹೇಳಿದ್ದಾರೆ.
ರಾಹುಲ್ ಗಾಂಧಿ ಹೇಳಿದ್ದೇನು
ವಾಶಿಮ್ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಯ ಅಂಗವಾಗಿ ಆಯೋಜಿಸಲಾದ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಸಾವರ್ಕರ್ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನ ಚಿಹ್ನೆ ಎಂದು ಹೇಳಿದ್ದರು. ಅಂಡಮಾನ್‌ನಲ್ಲಿ ಸಾವರ್ಕರ್ ಎರಡು-ಮೂರು ವರ್ಷಗಳ ಕಾಲ ಜೈಲಿನಲ್ಲಿದ್ದರು. ಅಲ್ಲಿಂದ ಅವರು ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆಯುತ್ತಿದ್ದರು. ಬ್ರಿಟಿಷರಿಂದ ಪಿಂಚಣಿ ಪಡೆಯುತ್ತಿದ್ದ ಅವರು ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದರು.