ಉಗ್ರರಿಗೆ ಹಣ ಸಂಗ್ರಹಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಲಾಗುತ್ತಿದೆ: ಎನ್ಐಎ ಮುಖ್ಯಸ್ಥ

ಉಗ್ರರಿಗೆ ಹಣ ಸಂಗ್ರಹಿಸಲು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಲಾಗುತ್ತಿದೆ ಎಂಬುದಕ್ಕೆ ಭಾರತ ಪುರಾವೆಗಳನ್ನು ಹೊಂದಿದೆ ಎಂದು ಎನ್‌ಐಎ ಮಹಾನಿರ್ದೇಶಕ ದಿನಕರ್ ಗುಪ್ತಾ ಅವರು ಗುರುವಾರ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಉಗ್ರರಿಗೆ ಹಣ ಸಂಗ್ರಹಿಸಲು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಲಾಗುತ್ತಿದೆ ಎಂಬುದಕ್ಕೆ ಭಾರತ ಪುರಾವೆಗಳನ್ನು ಹೊಂದಿದೆ ಎಂದು ಎನ್‌ಐಎ ಮಹಾನಿರ್ದೇಶಕ ದಿನಕರ್ ಗುಪ್ತಾ ಅವರು ಗುರುವಾರ ಹೇಳಿದ್ದಾರೆ.

ಭಯೋತ್ಪಾದಕರಿಗೆ ಹಣಕಾಸು ನೆರವು ನಿಗ್ರಹದ ಬಗ್ಗೆ ಎರಡು ದಿನಗಳ ಅಂತರರಾಷ್ಟ್ರೀಯ ಸಚಿವರ ಸಮ್ಮೇಳನದಲ್ಲಿ ಈ ಚರ್ಚಿಸಲಾಗುವುದು ಎಂದು ಗುಪ್ತಾ ತಿಳಿಸಿದ್ದಾರೆ.

ಶುಕ್ರವಾರದಿಂದ ಪ್ರಾರಂಭವಾಗುವ ಸಮ್ಮೇಳನಕ್ಕೂ ಮೊದಲು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗುಪ್ತಾ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ. ಆದರೆ ಚೀನಾ ಇನ್ನೂ ತನ್ನ ಉಪಸ್ಥಿತಿಯನ್ನು ಖಚಿತಪಡಿಸಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವಾಲಯ ಆಯೋಜಿಸಿರುವ ಭಯೋತ್ಪಾದನೆಗೆ ಹಣಕಾಸು ನಿಗ್ರಹ ಕುರಿತು ಉಗ್ರರಿಗೆ ಹಣವಿಲ್ಲ ಸಚಿವರ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಉದ್ಘಾಟಿಸಲಿದ್ದಾರೆ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com