ಬಾಂಬ್‌ ಸ್ಫೋಟಿಸಿ ಕೊಲ್ಲುತ್ತೇವೆ: ಇಂದೋರ್‌ನಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಗೆ ಬಾಂಬ್ ಬೆದರಿಕೆ; ತನಿಖೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾರತ್ ಜೋಡೊ ಯಾತ್ರೆಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬಾಂಬ್‌ ಸ್ಪೋಟಿಸಿ ಕೊಲ್ಲುತ್ತೇವೆ ಎಂಬ ಬೆದರಿಕೆ ಪತ್ರವೊಂದು ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.
ಭಾರತ್ ಜೋಡೋ ಯಾತ್ರೆ
ಭಾರತ್ ಜೋಡೋ ಯಾತ್ರೆ

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾರತ್ ಜೋಡೊ ಯಾತ್ರೆಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬಾಂಬ್‌  ಸ್ಫೋಟಿಸಿ ಕೊಲ್ಲುತ್ತೇವೆ ಎಂಬ ಬೆದರಿಕೆ ಪತ್ರವೊಂದು ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

ಇಂದೋರ್‌ನ ಅಂಗಡಿಯೊಂದಕ್ಕೆ ಬಾಂಬ್ ಬೆದರಿಕೆ ಪತ್ರ ಬಂದಿದ್ದು, ಈ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಹುಸಿ ಬೆದರಿಕೆ ಎಂದು ಶಂಕಿಸಲಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ದೂರು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಇಂದೋರ್‌ನ ಪೊಲೀಸ್ ಆಯುಕ್ತ ಎಚ್.ಸಿ. ಮಿಶ್ರಾ, ನಗರದ ಜುನಿ ಪ್ರದೇಶದಲ್ಲಿ ಸ್ನ್ಯಾಕ್ ಅಂಗಡಿಯೊಂದಕ್ಕೆ ಗುರುವಾರ ಸಂಜೆ ಬೆದರಿಕೆ ಪತ್ರ ಬಂದಿದ್ದು, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸುವವರು ಖಾಲ್ಸಾ ಕ್ರೀಡಾಂಗಣದಲ್ಲಿ ಉಳಿದುಕೊಂಡರೆ ನಗರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸುವ ಬಗ್ಗೆ ಪತ್ರದಲ್ಲಿ ಉಲ್ಲೇಖವಿಲ್ಲ ಎಂದು ಅವರು ಹೇಳಿದರು. ಶುಕ್ರವಾರ ಬೆಳಗ್ಗೆ ಸಿಹಿ ಅಂಗಡಿಯೊಂದರ ಹೊರಗೆ ಅಪರಿಚಿತ ವ್ಯಕ್ತಿಯೊಬ್ಬರು ಬೆದರಿಕೆ ಪತ್ರವನ್ನು ಬಿಟ್ಟು ಹೋಗಿದ್ದರು ಎಂದು ತಿಳಿದುಬಂದಿದೆ. 

ಸಮೀಪದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಗಾಗಿ ಶೋಧ ಆರಂಭಿಸಿದ್ದಾರೆ. ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 507 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ಮಾಧ್ಯಮಮೊಂದಕ್ಕೆ ಖಚಿತಪಡಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com