ರಾಹುಲ್ ಗಾಂಧಿ - ಸಾವರ್ಕರ್
ರಾಹುಲ್ ಗಾಂಧಿ - ಸಾವರ್ಕರ್

ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಪೊಲೀಸರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಥಾಣೆ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಪೊಲೀಸರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ರಾಹುಲ್ ಗಾಂಧಿ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ ಎಂದು ಅವರು ಹೇಳಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಕಾರ್ಯಕಾರಿ ವಂದನಾ ಡೋಂಗ್ರೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳ ಮೂಲಕ ರಾಹುಲ್ ಗಾಂಧಿ ನಾಗರಿಕರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರುದಾರರು ಆರೋಪಿಸಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 (ಮಾನಷ್ಟ) ಮತ್ತು 501 (ಮಾನಹಾನಿಕರವೆಂದು ತಿಳಿದಿದ್ದರೂ ಅದನ್ನು ಮಾಡುವು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸದ್ಯ ಮಹಾರಾಷ್ಟ್ರದ ಮೂಲಕ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ, ಗುರುವಾರ ಅಕೋಲಾ ಜಿಲ್ಲೆಯ ವಡೇಗಾಂವ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ, 'ಸಾವರ್ಕರ್ ಅವರು ಬ್ರಿಟಿಷ್ ಆಡಳಿತಗಾರರಿಗೆ ಸಹಾಯ ಮಾಡಿದರು ಮತ್ತು ಭಯದಿಂದ ಅವರಿಗೆ ಕ್ಷಮಾದಾನ ಪತ್ರ ಬರೆದುಕೊಟ್ಟಿದ್ದರು. ಆ ಮೂಲಕ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಬಾಯಿ ಪಟೇಲ್, ಜವಾಹರಲಾಲ್ ನೆಹರು ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರಿಗೆ ದ್ರೋಹ ಬಗೆದಿದ್ದರು' ಎಂದು ಹೇಳಿದರು.

ಅದಕ್ಕೂ ಎರಡು ದಿನಗಳ ಮೊದಲು, ತಮ್ಮ ಯಾತ್ರೆಯ ಭಾಗವಾಗಿ ಆಯೋಜಿಸಲಾದ ವಾಶಿಮ್ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಅವರು, ಸಾವರ್ಕರ್ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಿಹ್ನೆ. ಎರಡು-ಮೂರು ವರ್ಷಗಳ ಕಾಲ ಅಂಡಮಾನ್ ಜೈಲಿನಲ್ಲಿದ್ದ ಸಾವರ್ಕರ್ ಅವರು ಕ್ಷಮಾದಾನ ಅರ್ಜಿಗಳನ್ನು ಬರೆಯಲು ಪ್ರಾರಂಭಿಸಿದರು ಎಂದು ಕರೆದರು.

ರಾಹುಲ್ ಗಾಂಧಿ ಅವರ ಈ ಹೇಳಿಕೆಯನ್ನು ಬಿಜೆಪಿ ಮತ್ತು ಶಿಂಧೆ ನೇತೃತ್ವದ ಬಣ ಟೀಕಿಸಿದೆ. ಅವರ ವಿರುದ್ಧ ಈ ಪಕ್ಷಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಉದ್ಧವ್ ಠಾಕ್ರೆ ಅವರ ಬಣವು ರಾಹುಲ್ ಗಾಂಧಿಯವರ ಹೇಳಿಕೆಗೆ ಅಸಮ್ಮತಿ ಸೂಚಿಸಿದ್ದಾರೆ.

ಸಾವರ್ಕರ್ ಅವರ ಮರಿ ಮೊಮ್ಮಗ ರಂಜಿತ್ ಸಾವರ್ಕರ್ ಅವರು ಗುರುವಾರ ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಮೆಯಲ್ಲಿ ತನ್ನ ಅಜ್ಜನನ್ನು ಅವಮಾನಿಸಿದ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದಾರೆ.

ಇದಕ್ಕೂ ಮುನ್ನ 2014 ರಲ್ಲಿ ಥಾಣೆಯ ಭಿವಂಡಿ ಟೌನ್‌ಶಿಪ್‌ನಲ್ಲಿ ರಾಹುಲ್ ಗಾಂಧಿ ನಡೆಸಿದ್ದ ಭಾಷಣವನ್ನು ವೀಕ್ಷಿಸಿದ ನಂತರ ಆರ್‌ಎಸ್‌ಎಸ್ ಕಾರ್ಯಕರ್ತರೊಬ್ಬರು ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಲ್ಲಿ ಕಾಂಗ್ರೆಸ್ ನಾಯಕ, ಮಹಾತ್ಮ ಗಾಂಧಿಯವರ ಹತ್ಯೆಯ ಹಿಂದೆ ಆರ್‌ಎಸ್‌ಎಸ್ ಕೈವಾಡವಿದೆ ಎಂದು ಆರೋಪಿಸಿದ್ದರು.

ಈ ಹೇಳಿಕೆಯು ಆರ್‌ಎಸ್‌ಎಸ್‌ನ ಪ್ರತಿಷ್ಠೆಗೆ ಧಕ್ಕೆ ತಂದಿದೆ ಎಂದು ದೂರುದಾರರು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com