ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ಫಾರೂಖ್ ಅಬ್ದುಲ್ಲಾ ರಾಜೀನಾಮೆ!
ಜಮ್ಮು ಮತ್ತುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಶುಕ್ರವಾರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಹೊಸ ಪೀಳಿಗೆಯವರು ಅಧ್ಯಕ್ಷ ಸ್ಥಾನ ವಹಿಸಲು ಇದು ಸೂಕ್ತ ಸಮಯವಾಗಿದೆ ಎಂದು ಅವರು ಹೇಳಿದ್ದಾರೆ.
Published: 18th November 2022 11:24 AM | Last Updated: 18th November 2022 01:51 PM | A+A A-

ಫಾರೂಖ್ ಅಬ್ದುಲ್ಲಾ
ಶ್ರೀನಗರ: ಜಮ್ಮು ಮತ್ತುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಶುಕ್ರವಾರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಹೊಸ ಪೀಳಿಗೆಯವರು ಅಧ್ಯಕ್ಷ ಸ್ಥಾನ ವಹಿಸಲು ಇದು ಸೂಕ್ತ ಸಮಯವಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್ 5 ರಂದು ಚುನಾವಣೆ ನಡೆಯಲಿದ್ದು, ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಯುವ ಪೀಳಿಗೆಯವರು ಪಕ್ಷದ ಜವಾಬ್ದಾರಿ ವಹಿಸಿಕೊಳ್ಳಲು ಇದು ಸರಿಯಾದ ಸಮಯವಾಗಿದೆ ಎಂದು ಕಣಿವೆ ರಾಜ್ಯದ ಹಿರಿಯ ರಾಜಕಾರಣಿ ಫಾರೂಖ್ ಅಬ್ದುಲ್ಲಾ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಇದನ್ನೂ ಓದಿ: ನ್ಯಾಯ ಸಿಗದ ಹೊರತು ಕಾಶ್ಮೀರದಲ್ಲಿ ಹತ್ಯೆಗಳು ನಿಲ್ಲುವುದಿಲ್ಲ: ಫಾರೂಖ್ ಅಬ್ದುಲ್ಲಾ
ಪಕ್ಷದ ಅತ್ಯುನ್ನತ ಸ್ಥಾನಕ್ಕೆ ಪಕ್ಷದಿಂದ ಯಾರೇ ಬೇಕಾದರೂ ಸ್ಪರ್ಧಿಸಬಹುದಾಗಿದೆ. ಇದು ಪ್ರಜಾಸತಾತ್ಮಕ ಪ್ರಕ್ರಿಯೆಯಾಗಿದೆ ಎಂದು ಅವರು ತಿಳಿಸಿದ್ದಾರೆ. 85 ವರ್ಷದ ಅಬ್ದುಲ್ಲಾ, ಪಕ್ಷದ ವರಿಷ್ಠರ ಸ್ಥಾನ ವಹಿಸಲಿದ್ದು, ಪ್ರಸ್ತುತ ಉಪಾಧ್ಯಕ್ಷರಾಗಿರುವ ಅವರ ಮಗ ಒಮರ್ ಅಬ್ದಲ್ಲಾ, ಪಕ್ಷದ ನೂತನ ಅಧ್ಯಕ್ಷರಾಗುವ ಸಾಧ್ಯತೆಯಿದೆ.