ಮುಂಬೈ-ಪುಣೆ ಹೆದ್ದಾರಿಯಲ್ಲಿ ಟ್ರಕ್ ಗೆ ಕಾರು ಡಿಕ್ಕಿ: ಐವರು ಸಾವು, ನಾಲ್ವರಿಗೆ ಗಂಭೀರ ಗಾಯ

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖೋಪೋಲಿ ಬಳಿ ಮುಂಬೈ-ಪುಣೆ ಹೆದ್ದಾರಿಯಲ್ಲಿ ಕಾರು ಹಿಂದಿನಿಂದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದ ದೃಶ್ಯ
ಅಪಘಾತದ ದೃಶ್ಯ

ಖೋಪೋಲಿ (ಮಹಾರಾಷ್ಟ್ರ): ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖೋಪೋಲಿ ಬಳಿ ಮುಂಬೈ-ಪುಣೆ ಹೆದ್ದಾರಿಯಲ್ಲಿ ಕಾರು ಹಿಂದಿನಿಂದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಕಳೆದ ಮಧ್ಯರಾತ್ರಿ ಢೇಕು ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ. ಕಾರು ಪುಣೆಯಿಂದ ಮುಂಬೈಗೆ ಹೋಗುತ್ತಿದ್ದಾಗ ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಹಿಂದಿನಿಂದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಂಬತ್ತು ಮಂದಿ ಇದ್ದರು. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬರು ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದರು ಎಂದು ಖೋಪೋಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರೆಲ್ಲರೂ ಪುರುಷರಾಗಿದ್ದು, ಗಾಯಗೊಂಡ ನಾಲ್ವರಲ್ಲಿ ಒಬ್ಬರು ಮಹಿಳೆಯಾಗಿದ್ದಾರೆ ಎಂದು ಅವರು ಹೇಳಿದರು. ಚಾಲಕನ ನಿಯಂತ್ರಣ ತಪ್ಪಿದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com