ಬೀದಿ ನಾಯಿಗಳನ್ನು ಸಾಕುವುದೆಂದರೆ ಜನರ ಜೀವನದ ಮೇಲೆ ದುಷ್ಪರಿಣಾಮ ಬೀರುವುದು ಎಂದಲ್ಲ: ಸುಪ್ರೀಂ ಕೋರ್ಟ್

ತಾನು ಸಾಕಿಕೊಂಡಿದ್ದಾಗಿ ಹೇಳಿಕೊಂಡಿರುವ 60 ಬೀದಿ ನಾಯಿಗಳಿಗೆ ರಕ್ಷಣೆ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ನವದೆಹಲಿ: ತಾನು ಸಾಕಿಕೊಂಡಿದ್ದಾಗಿ ಹೇಳಿಕೊಂಡಿರುವ 60 ಬೀದಿ ನಾಯಿಗಳಿಗೆ ರಕ್ಷಣೆ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಎಂ.ಎಂ. ಸುಂದ್ರೇಶ್ ಅವರನ್ನೊಳಗೊಂಡ ಪೀಠವು, ಇದೇ ವಿಚಾರ ಬಾಕಿ ಉಳಿದಿರುವ ಬೇರೆ ಪೀಠದ ಮುಂದೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರ ಪರ ಹಾಜರಿದ್ದ ವಕೀಲರಿಗೆ ಹೇಳಿತು.

'ಬೀದಿನಾಯಿಗಳನ್ನು ಸಾಕುವುದು ಎಂದರೆ, ಅವುಗಳನ್ನು ಬೀದಿಗಿಳಿಸಿ ಹೋರಾಟ ಮಾಡಿ ಜನರ ಜೀವನದ ಮೇಲೆ ದುಷ್ಪರಿಣಾಮ ಬೀರುವುದು ಎಂದಲ್ಲ' ಎಂದು ಅಭಿಪ್ರಾಯಪಟ್ಟ ಪೀಠ, ಇದೇ ವಿಚಾರವಾಗಿ ಮತ್ತೊಂದು ಪೀಠವು ವಿಚಾರಣೆ ನಡೆಸುತ್ತಿದ್ದು, ಈಗ ಸಲ್ಲಿಸಿರುವ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಲು ಸಲ್ಲದು' ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಬೀದಿನಾಯಿಗಳನ್ನು ಸಂರಕ್ಷಿಸಲಾಗುತ್ತಿಲ್ಲ ಎಂದು ಪ್ರತಿಪಾದಿಸಿ ಮಧ್ಯಪ್ರದೇಶ ಮೂಲದ ಸಮ್ರಿನ್ ಬಾನೊ ಅವರು ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತು.

ಬೀದಿ ನಾಯಿಗಳ ರಕ್ಷಣೆಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ ಅವರು, ತಾನು ಸಾಕುವುದಾಗಿ ಹೇಳಿಕೊಂಡ 67 ಬೀದಿ ನಾಯಿಗಳಿಗೆ ರಕ್ಷಣೆ ನೀಡುವಂತೆ ಕೋರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com