ಮಹಾರಾಷ್ಟ್ರ ವಿವಿಯಿಂದ ಶರದ್ ಪವಾರ್, ನಿತಿನ್ ಗಡ್ಕರಿಗೆ ಡಿ.ಲಿಟ್ ಪದವಿ

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಔರಂಗಾಬಾದ್‌ ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯ ಡಾಕ್ಟರ್ ಆಫ್ ಲಿಟರೇಚರ್ (ಡಿ.ಲಿಟ್) ಪದವಿ ಪ್ರದಾನ ಮಾಡಲಿದೆ.
ಶರದ್ ಪವಾರ್-ನಿತಿನ್ ಗಡ್ಕರಿ
ಶರದ್ ಪವಾರ್-ನಿತಿನ್ ಗಡ್ಕರಿ

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಔರಂಗಾಬಾದ್‌ ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯ ಡಾಕ್ಟರ್ ಆಫ್ ಲಿಟರೇಚರ್ (ಡಿ.ಲಿಟ್) ಪದವಿ ಪ್ರದಾನ ಮಾಡಲಿದೆ ಎಂದು ವಿವಿ ಕುಲಪತಿ ಡಾ.ಪ್ರಮೋದ್ ಯೋಲೆ ಗುರುವಾರ ತಿಳಿಸಿದ್ದಾರೆ.

ನವೆಂಬರ್ 19 ರಂದು ನಡೆಯುವ ವಿಶ್ವವಿದ್ಯಾಲಯದ 62ನೇ ಘಟಿಕೋತ್ಸವ ಸಮಾರಂಭದಲ್ಲಿ ಡಿ.ಲಿಟ್ ಪದವಿ ಪ್ರದಾನ ಮಾಡಲಾಗುವುದು. ನಳಂದ ವಿಶ್ವವಿದ್ಯಾಲಯದ ಕುಲಪತಿ ಡಾ ವಿಜಯ್ ಭಟ್ಕರ್ ಅವರ ಉಪಸ್ಥಿತಿಯಲ್ಲಿ ಈ ಘಟಿಕೋತ್ಸವದಲ್ಲಿ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ವಿಶ್ವವಿದ್ಯಾಲಯದ ಸುಮಾರು 1.05 ಲಕ್ಷ ವಿದ್ಯಾರ್ಥಿಗಳು ಈ ವರ್ಷ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಾಕ್ಟರೇಟ್ ಪಡೆದಿದ್ದಾರೆ ಎಂದು ಕುಲಪತಿ ತಿಳಿಸಿದ್ದಾರೆ.

ವಿಶ್ವವಿದ್ಯಾಲಯವು ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಅವರನ್ನು ಡಿ.ಲಿಟ್‌ನೊಂದಿಗೆ ಗೌರವಿಸುತ್ತದೆ ಎಂದು ಯೊಲೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com