ಸಾವರ್ಕರ್ ವಿರುದ್ಧ ರಾಹುಲ್ ಗಾಂಧಿ ಹೇಳಿಕೆ ಎಂವಿಎ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಕಾಂಗ್ರೆಸ್

ವಿಡಿ ಸಾವರ್ಕರ್ ಅವರನ್ನು ಕಟುವಾಗಿ ಟೀಕಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಸಮರ್ಥಿಸಿಕೊಂಡ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಅವರು, ರಾಹುಲ್ ಹಿಂದುತ್ವವಾದಿ ಸಾವರ್ಕರ್ ಅವರನ್ನು ಟಾರ್ಗೆಟ್ ಮಾಡುತ್ತಿಲ್ಲ.
ಉದ್ಧವ್ ಠಾಕ್ರೆ - ರಾಹುಲ್ ಗಾಂಧಿ
ಉದ್ಧವ್ ಠಾಕ್ರೆ - ರಾಹುಲ್ ಗಾಂಧಿ

ಶೇಗಾಂವ್: ವಿಡಿ ಸಾವರ್ಕರ್ ಅವರನ್ನು ಕಟುವಾಗಿ ಟೀಕಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಸಮರ್ಥಿಸಿಕೊಂಡ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಅವರು, ರಾಹುಲ್ ಹಿಂದುತ್ವವಾದಿ ಸಾವರ್ಕರ್ ಅವರನ್ನು ಟಾರ್ಗೆಟ್ ಮಾಡುತ್ತಿಲ್ಲ.  ಆದರೆ ಕೇವಲ ಐತಿಹಾಸಿಕ ಸತ್ಯವನ್ನು ಎತ್ತಿ ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಶೆಗಾಂವ್‌ ತಲುಪಿದ್ದು, ಇಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜೈರಾಮ್ ರಮೇಶ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಸಾವರ್ಕರ್ ಕುರಿತ ರಾಹುಲ್  ಗಾಂಧಿಯವರ ಅಭಿಪ್ರಾಯಗಳನ್ನು ಬೆಂಬಲಿಸದಿದ್ದರೂ, ಅದು ಮಹಾ ವಿಕಾಸ್ ಅಘಾಡಿ (ಎಂವಿಎ)ಮೈತ್ರಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

ನಿನ್ನೆ ಅಕೋಲಾ ಜಿಲ್ಲೆಯ ವಡೇಗಾಂವ್‌ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಸಾವರ್ಕರ್ ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದಾರೆ ಮತ್ತು ಭಯದಿಂದ ಅವರಿಗೆ ಕ್ಷಮಾದಾನ ಅರ್ಜಿ ಬರೆದಿದ್ದರು ಎಂದು ಆರೋಪಿಸಿದ್ದರು.

ಸಾವರ್ಕರ್ ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್)ದ ಚಿಹ್ನೆ ಎಂದು ಕಾಂಗ್ರೆಸ್ ನಾಯಕ ಈ ಹಿಂದೆ ಹೇಳಿದ್ದರು.

ರಾಹುಲ್ ಹೇಳಿಕೆ ಇದೀಗ ಪ್ರತಿಭಟನೆಗೆ ಕಾರಣವಾಗಿದ್ದು, ಉದ್ಧವ್ ಠಾಕ್ರೆ ಅವರು ಸ್ವಾತಂತ್ರ್ಯ ಹೋರಾಟಗಾರನ ಬಗ್ಗೆ ರಾಹುಲ್ ಗಾಂಧಿಯ ಹೇಳಿಕೆಗಳನ್ನು ಒಪ್ಪುವುದಿಲ್ಲ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com