
ಸಂಸತ್ತು
ಹೈದರಾಬಾದ್: ಡಿಸೆಂಬರ್ 7 ರಿಂದ ಡಿಸೆಂಬರ್ 29 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಶುಕ್ರವಾರ ಹೇಳಿದ್ದಾರೆ.
"2022ರ ಸಂಸತ್ ಚಳಿಗಾಲದ ಅಧಿವೇಶನವು ಡಿಸೆಂಬರ್ 7 ರಿಂದ ಪ್ರಾರಂಭವಾಗುತ್ತದೆ ಮತ್ತು ಡಿಸೆಂಬರ್ 29 ರವರೆಗೆ ಒಟ್ಟು 17 ದಿನ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ರಚನಾತ್ಮಕ ಚರ್ಚೆಗಾಗಿ ಎದುರು ನೋಡುತ್ತಿರುವುದಾಗಿ" ಜೋಶಿ ಟ್ವೀಟ್ ಮಾಡಿದ್ದಾರೆ.
ಭಾರತೀಯ ಜನತಾ ಪಕ್ಷದ 'ಸಂಸತ್ ಪ್ರವಾಸ ಯೋಜನೆ' ಅಂಗವಾಗಿ ಶುಕ್ರವಾರ ಹೈದರಾಬಾದ್‌ಗೆ ಆಗಮಿಸಿದ್ದ ಜೋಶಿ, ಹೈದರಾಬಾದ್‌ನಲ್ಲಿರುವ ಬಿಜೆಪಿ ಸಂಸದ ಧರ್ಮಪುರಿ ಅರವಿಂದ್ ಅವರ ನಿವಾಸದ ಮೇಲೆ ನಡೆದ ದಾಳಿಯನ್ನು ಖಂಡಿಸಿದರು.
"... ಟಿಆರ್‌ಎಸ್‌ನ ಈ ಧೋರಣೆ ಮತ್ತು ಅದರ ಗೂಂಡಾಗಿರಿ, ಜನಪ್ರತಿನಿಧಿಗಳಿಗೆ ಮತ್ತು ಬಿಜೆಪಿಯನ್ನು ಬೆಂಬಲಿಸುವವರಿಗೆ ಬೆದರಿಕೆ ಹಾಕುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.