ಕಾಶ್ಮೀರ: ಮಚಿಲ್ ಸೆಕ್ಟರ್‌ನಲ್ಲಿ ಹಿಮಕುಸಿತ, ಮೂವರು ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಮಚಿಲ್ ಸೆಕ್ಟರ್‌ನಲ್ಲಿ ಶುಕ್ರವಾರ ಹಿಮಪಾತಕ್ಕೆ ಸಿಲುಕಿ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಶ್ರೀನಗರದಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.
Published: 19th November 2022 12:47 AM | Last Updated: 19th November 2022 02:42 PM | A+A A-

ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ಸೆಕ್ಟರ್‌ನಲ್ಲಿ ಶುಕ್ರವಾರ ಹಿಮಪಾತಕ್ಕೆ ಸಿಲುಕಿ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಶ್ರೀನಗರದಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.
56 ಆರ್ ಆರ್ ನ ಮೂವರು ಸೈನಿಕರು ಗಡಿ ನಿಯಂತ್ರಣ ರೇಖೆಯ ಬಳಿ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಹಿಮಪಾತಕ್ಕೆ ಸಿಲುಕಿದರು ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ಉತ್ತರಾಖಂಡ ಹಿಮಕುಸಿತ ದುರಂತ: ಮತ್ತೆ ಮೂವರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 19ಕ್ಕೆ ಏರಿಕೆ
ಶೋಧ ಕಾರ್ಯಾಚರಣೆಯ ನಂತರ ಅವರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.