ಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಉದ್ಘಾಟಿಸಿದ್ದು, ಇದು ಈಶಾನ್ಯ ಪ್ರದೇಶದ 16ನೇ ವಿಮಾನ ನಿಲ್ದಾಣವಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ

ಇಟಾನಗರ: ಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಉದ್ಘಾಟಿಸಿದ್ದು, ಇದು ಈಶಾನ್ಯ ಪ್ರದೇಶದ 16ನೇ ವಿಮಾನ ನಿಲ್ದಾಣವಾಗಿದೆ.

ಹೊಸದಾಗಿ ನಿರ್ಮಾಣವಾಗಿರುವ ದೋನಿ ಪೋಲೋ ವಿಮಾನ ನಿಲ್ದಾಣ 640 ಕೋಟಿ ರೂ.ಗೂ ಹೆಚ್ಚಿನ ವೆಚ್ಚದಲ್ಲಿ ನಿರ್ಮಾಣವಾಗಿದ್ದು, 690 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ.

ಅರುಣಾಚಲ ಪ್ರದೇಶದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವಂತೆ ವಿಮಾನ ನಿಲ್ದಾಣಕ್ಕೆ ಹೆಸರಿಡಲಾಗಿದೆ. ಸ್ಥಳೀಯ ಭಾಷೆಯಲ್ಲಿ ದೋನಿ ಎಂದರೆ ಸೂರ್ಯ ಮತ್ತು ಪೋಲೋ ಎಂದರೆ ಚಂದ್ರ ಎನ್ನಲಾಗಿದೆ.

2300 ಮೀಟರ್ ರನ್‌ವೇ ಹೊಂದಿರುವ ಈ ವಿಮಾನ ನಿಲ್ದಾಣವು, ಎಲ್ಲಾ ಹವಾಮಾನ ದಿನದ ಕಾರ್ಯಾಚರಣೆಗಳಿಗೆ ಸೂಕ್ತವಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಅತ್ಯಾಧುನಿಕ ಕಟ್ಟಡವಾಗಿದ್ದು, ಇದು ಇಂಧನ ದಕ್ಷತೆ, ನವೀಕರಿಸಬಹುದಾದ ಇಂಧನ ಮತ್ತು ಸಂಪನ್ಮೂಲಗಳ ಮರುಬಳಕೆಯನ್ನು ಉತ್ತೇಜಿಸುತ್ತದೆ.

ಇಟಾನಗರದಲ್ಲಿ ಹೊಸ ವಿಮಾನ ನಿಲ್ದಾಣದ ಅಭಿವೃದ್ಧಿಯು ಈ ಪ್ರದೇಶದ ಸಂಪರ್ಕವನ್ನು ಸುಧಾರಿಸುವುದಲ್ಲದೆ, ವ್ಯಾಪಾರ ಮತ್ತು ಪ್ರವಾಸೋದ್ಯಮದ ಬೆಳವಣಿಗೆಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ, ಆ ಮೂಲಕ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com