ಒಡಕಿನ ಬಗ್ಗೆ ಎಚ್ಚರಿಸಿದ ಸಂಜಯ್ ರಾವುತ್, ಮಹಾ ವಿಕಾಸ್ ಅಘಾಡಿಯಲ್ಲಿ ಎಲ್ಲವೂ ಚೆನ್ನಾಗಿದೆ ಎಂದ ಕಾಂಗ್ರೆಸ್
ವೀರ ಸಾವರ್ಕರ್ ಅವರ ದೇಶಪ್ರೇಮವನ್ನು ಪ್ರಶ್ನಿಸುವುದು ಮಹಾರಾಷ್ಟ್ರದಲ್ಲಿ ತಮ್ಮ ಮಹಾ ವಿಕಾಸ್ ಅಘಾಡಿ (ಎಂವಿಎ) ವೈತ್ರಿಯನ್ನು ಒಡೆಯಲು ಕಾರಣವಾಗಬಹುದು ಎಂದು ಶಿವಸೇನೆಯ ಉದ್ಧವ್ ಠಾಕ್ರೆ ಬಣವು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ, ತಮ್ಮ ಮೈತ್ರಿಯು ಗಟ್ಟಿಯಾಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿತು.
Published: 19th November 2022 11:10 AM | Last Updated: 19th November 2022 11:10 AM | A+A A-

ಸಂಜಯ್ ರಾವುತ್ - ರಾಹುಲ್ ಗಾಂಧಿ
ಮುಂಬೈ: ವೀರ ಸಾವರ್ಕರ್ ಅವರ ದೇಶಪ್ರೇಮವನ್ನು ಪ್ರಶ್ನಿಸುವುದು ಮಹಾರಾಷ್ಟ್ರದಲ್ಲಿ ತಮ್ಮ ಮಹಾ ವಿಕಾಸ್ ಅಘಾಡಿ (ಎಂವಿಎ) ವೈತ್ರಿಯನ್ನು ಒಡೆಯಲು ಕಾರಣವಾಗಬಹುದು ಎಂದು ಶಿವಸೇನೆಯ ಉದ್ಧವ್ ಠಾಕ್ರೆ ಬಣವು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ, ತಮ್ಮ ಮೈತ್ರಿಯು ಗಟ್ಟಿಯಾಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿತು.
ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ, ಗುರುವಾರ ಅಕೋಲಾ ಜಿಲ್ಲೆಯ ವಡೇಗಾಂವ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ, 'ಸಾವರ್ಕರ್ ಅವರು ಬ್ರಿಟಿಷ್ ಆಡಳಿತಗಾರರಿಗೆ ಸಹಾಯ ಮಾಡಿದರು ಮತ್ತು ಭಯದಿಂದ ಅವರಿಗೆ ಕ್ಷಮಾದಾನ ಪತ್ರ ಬರೆದುಕೊಟ್ಟಿದ್ದರು. ಆ ಮೂಲಕ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಬಾಯಿ ಪಟೇಲ್, ಜವಾಹರಲಾಲ್ ನೆಹರು ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರಿಗೆ ದ್ರೋಹ ಬಗೆದಿದ್ದರು' ಎಂದು ಹೇಳಿದರು.
ಸಾವರ್ಕರ್ ಅವರಿಗೆ ಅವಮಾನಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸುವಂತೆ ಉದ್ಧವ್ ಠಾಕ್ರೆ ಬಣದ ಮೇಲೆ ಬಿಜೆಪಿ ಒತ್ತಡ ಹೇರಿದೆ.
ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ್ ರಾವುತ್ ಅವರು, 'ನಾವು ವೀರ ಸಾವರ್ಕರ್ ಅವರನ್ನು ಗೌರವಾನ್ವಿತ ವ್ಯಕ್ತಿ ಎಂದು ಪರಿಗಣಿಸುತ್ತೇವೆ. ರಾಹುಲ್ ಗಾಂಧಿ ಅವರು ಸಾವರ್ಕರ್ ವಿರುದ್ಧ ಇಂತಹ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ಮುಂದುವರೆಸಿದರೆ, ಅದು ಮಹಾರಾಷ್ಟ್ರದಲ್ಲಿ ಎಂವಿಎ ಮೈತ್ರಿಯು ಮುರಿಯಲು ಕಾರಣವಾಗಬಹುದು' ಎಂದಿದ್ದಾರೆ.
ಇದನ್ನೂ ಓದಿ: ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು
ಇದಾದ ಗಂಟೆಗಳ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ರಾವುತ್ ಅವರೊಂದಿಗೆ ಮಾತನಾಡಿದ ನಂತರ ಈ ವಿಚಾರವನ್ನು ಬಗೆಹರಿಸಿಕೊಳ್ಳಲಾಗಿದೆ. ಎಂವಿಎಯಲ್ಲಿ ಯಾವುದೇ ಬಿರುಕಿಲ್ಲ ಎಂದು ಅವರಿಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.
ಜೈರಾಮ್ ರಮೇಶ್ ಮಾತನಾಡಿ, 'ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ವಿಭಿನ್ನ ಅಭಿಪ್ರಾಯಗಳನ್ನು ಹೊಂದುವ ಹಕ್ಕಿದೆ. 'ಸಾವರ್ಕರ್ ಅವರು ಬ್ರಿಟಿಷ್ ಆಡಳಿತಗಾರರಿಗೆ ಸಹಾಯ ಮಾಡಿದರು ಎಂಬುದಕ್ಕೆ ಸಾಕ್ಷ್ಯಚಿತ್ರದ ಸಾಕ್ಷ್ಯವನ್ನು ನಾವು ನಂಬುತ್ತೇವೆ'. ಪಕ್ಷವು ಇದನ್ನು ಉದ್ದೇಶಪೂರ್ವಕವಾಗಿ ಬೆಳೆಸುತ್ತಿಲ್ಲ, ಆದರೆ ಅದು ವಿಭಿನ್ನ ಸಂದರ್ಭದಲ್ಲಿ ಬಂದಿದೆ' ಎಂದು ಅವರು ಹೇಳಿದರು.
ಶಿವಾಜಿ ಮಹಾರಾಜರಂತೆ ಯಾತ್ರೆ ಎಲ್ಲರನ್ನೂ ಒಗ್ಗೂಡಿಸುತ್ತದೆ
ಶುಕ್ರವಾರ ಮಾತನಾಡಿದ ರಾಹುಲ್ ಗಾಂಧಿ, ಮರಾಠ ರಾಜ್ಯವನ್ನು ಕಟ್ಟಲು ಛತ್ರಪತಿ ಶಿವಾಜಿ ಮಹಾರಾಜ್ ಅವರು ತಮ್ಮ ಜನರ ಧ್ವನಿಯನ್ನು ಆಲಿಸಿದರು. ಇದೇ ಮಾದರಿಯಲ್ಲಿ ಭಾರತ್ ಜೋಡೋ ಯಾತ್ರೆಯು ಶಾಂತಿಯನ್ನು ಹರಡುವ ಮೂಲಕ ಎಲ್ಲಾ ವರ್ಗದ ಜನರನ್ನು ಒಟ್ಟುಗೂಡಿಸುತ್ತದೆ' ಎಂದು ಅವರು ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಶೆಗಾಂವ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಹೇಳಿದರು.