ಮಧ್ಯ ಪ್ರದೇಶ: ಭಾರತ್ ಜೋಡೋ ಯಾತ್ರೆಗೆ ಬಾಂಬ್ ಬೆದರಿಕೆ, ಇಬ್ಬರ ಬಂಧನ
ಇಂದೋರ್: ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇದೇ 28 ರಂದು ಖಾಲ್ಸಾ ಸ್ಟೇಡಿಯಂನಲ್ಲಿ ತಂಗುವುದಾದರೆ ಬಾಂಬ್ ಸ್ಫೋಟಿಸುವುದಾಗಿ ಅನಾಮಧೇಯ ಪತ್ರ ಬಂದ ನಂತರ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ. ಇತರ ಮೂವರನ್ನು ಗುರುತಿಸಲಾಗಿದ್ದು, ಪೊಲೀಸ್ ತಂಡ ಹರಿಯಾಣಕ್ಕೆ ತೆರಳಿದೆ ಎಂದು ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.
ಪತ್ರದಲ್ಲಿ 1984 ರ ಸಿಖ್ ವಿರೋಧಿ ದಂಗೆಯನ್ನು ಉಲ್ಲೇಖಿಸಿದ್ದು, ರಾಹುಲ್ ಗಾಂಧಿ ಮತ್ತು ಸಂಸದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರ ಹತ್ಯೆಯ ಬೆದರಿಕೆ ಹಾಕಲಾಗಿದೆ. ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಅವರಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಮಿಶ್ರಾ ಹೇಳಿದ್ದಾರೆ.
ಭಾನುವಾರ ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಬುರ್ಹಾನ್‌ಪುರಕ್ಕೆ ಯಾತ್ರೆ ಪ್ರವೇಶಿಸಲಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಬೆದರಿಕೆ ಪತ್ರ ಬಂದ ನಂತರ ಐಪಿಸಿ ಸೆಕ್ಷನ್ 507 (ಅಪರಿಚಿತ ವ್ಯಕ್ತಿಯಿಂದ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಯಾತ್ರೆ ವೇಳೆ ಕಮಲ್ ನಾಥ್ ಕ್ರೀಡಾಂಗಣ ಪ್ರವೇಶಿಸಿದರೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ