ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್: ಎಲ್‌ಇಟಿ ಸಂಘಟನೆ ಹೈಬ್ರಿಡ್ ಉಗ್ರ ಹತ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಈ ವೇಳೆ ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಸಂಘಟನೆಯ ಓರ್ವ ಹೈಬ್ರಿಡ್ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
Published: 20th November 2022 11:05 AM | Last Updated: 20th November 2022 11:05 AM | A+A A-

ಕಾರ್ಯಾಚರಣೆ ನಡೆಸುತ್ತಿರುವ ಭದ್ರತಾಪಡೆಗಳು.
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಈ ವೇಳೆ ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಸಂಘಟನೆಯ ಓರ್ವ ಹೈಬ್ರಿಡ್ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾದ ಚೆಕಿ ದುಡೂ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಇಂದು ಬೆಳಿಕ್ಕೆ ಭಾರೀ ಕಾರ್ಯಾಚರಣೆ ಆರಂಭಿಸಿತ್ತು.
ಭದ್ರತಾ ಪಡೆಗಳು ಶಂಕಿತ ಉಗ್ರರ ಅಡಗುತಾಣಗಳತ್ತ ಸಾಗುತ್ತಿದ್ದಂತೆಯೇ ಉಗ್ರರು ಸೇನಾಪಡೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು.
ಇದನ್ನೂ ಓದಿ: ಜಮ್ಮು-ಕಾಶ್ಮೀರ: ಇಬ್ಬರು ಎಲ್ಇಟಿ ಉಗ್ರರ ಬಂಧನ
ಈ ವೇಳೆ ಉಗ್ರರ ಅಡುತಾಣಗಳ ಗುರುತಿಸಲು ಪೊಲೀಸರೊಂದಿಗೆ ಸಹಕರಿಸುತ್ತಿದ್ದ ಎಲ್ಇಟಿ ಉಗ್ರನಿಗೆ ಗುಂಡು ತಗುಲಿದ್ದು, ಕೂಡಲೇ ಆದನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿದ್ದ ಎಂದು ವೈದ್ಯರು ತಿಳಿಸಿದ್ದಾರೆಂದು ಕಾಶ್ಮೀರ ವಲಯದ ಪೊಲೀಸರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಹತ್ಯೆಯಾಗಿರುವ ಉಗ್ರ ಸಜ್ಜದ್ ತಂತ್ರಾಯ್ ಎಂದು ಗುರ್ತಿಸಲಾಗಿದೆ. ನವೆಂಬರ್ 13 ರಂದು ಬಿಜ್‌ಬೆಹರಾದ ರಖ್ಮೋಮೆನ್‌ನಲ್ಲಿ ಕಾರ್ಮಿಕನ ಹತ್ಯೆಯಲ್ಲಿ ತಂತ್ರಾಯ್ ಭಾಗಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಜ್ಜದ್ ತಂತ್ರಾಯ್ ಹೈಬ್ರಿಡ್ ಉಗ್ರನಾಗಿದ್ದು, ಎಲ್ಇಟಿ ಉಗ್ರ ಸಂಘಟನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. 13/11/2022 ರಂದು ಅನಂತನಾಗ್‌ನ ಬಿಜ್‌ಬೆಹರಾ, ರಾಖ್‌ಮೊಮೆನ್‌ನಲ್ಲಿ ಇಬ್ಬರು ಕಾರ್ಮಿಕರ ಮೇಲೆ ದಾಳಿ ನಡೆಸಿದ್ದ.