ನಾಗಾಲ್ಯಾಂಡ್; ವಿಚಾರಣಾಧೀನ ಕೈದಿಗಳು- ಕೊಲೆ ಅಪರಾಧಿಗಳು ಸೇರಿ ಜೈಲಿನಿಂದ ಒಂಬತ್ತು ಕೈದಿಗಳು ಪರಾರಿ
ನಾಗಾಲ್ಯಾಂಡ್‌ನ ಮೋನ್ ಜಿಲ್ಲಾ ಕಾರಾಗೃಹದಲ್ಲಿದ್ದ ಕನಿಷ್ಠ ಒಂಬತ್ತು ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Published: 20th November 2022 03:23 PM | Last Updated: 20th November 2022 03:23 PM | A+A A-

ಸಾಂದರ್ಭಿಕ ಚಿತ್ರ
ಕೋಹಿಮಾ: ನಾಗಾಲ್ಯಾಂಡ್‌ನ ಮೋನ್ ಜಿಲ್ಲಾ ಕಾರಾಗೃಹದಲ್ಲಿದ್ದ ಕನಿಷ್ಠ ಒಂಬತ್ತು ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಪರಾರಿಯಾಗಿರುವವರಲ್ಲಿ ವಿಚಾರಣಾಧೀನ ಕೈದಿಗಳು ಮತ್ತು ಕೊಲೆ ಅಪರಾಧಿಗಳು ಸೇರಿದ್ದಾರೆ. ತಮ್ಮ ಸೆಲ್ ಕೀಗಳನ್ನು ತೆಗೆದು ಶನಿವಾರ ಮುಂಜಾನೆ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ಮಾನ್ ಪೊಲೀಸ್ ಠಾಮೆಯಲ್ಲಿ್ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಪೊಲೀಸರು ತೀವ್ರ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ ಮತ್ತು ಸಂಬಂಧಿಸಿದ ವಿವಿಧ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದಾರೆ' ಎಂದು ಅವರು ಹೇಳಿದರು.
ಜೈಲಿನಿಂದ ತಪ್ಪಿಸಿಕೊಂಡವರ ಬಗ್ಗೆ ಯಾವುದೇ ಮಾಹಿತಿಯಿದ್ದಲ್ಲಿ ಪೊಲೀಸರನ್ನು ಸಂಪರ್ಕಿಸಲು ಗ್ರಾಮ ಸಭೆಗಳಿಗೆ ತಿಳಿಸಲಾಗಿದೆ.