ಕರೆ ಮಾಡಿದ ರಾಹುಲ್ ಗಾಂಧಿ; ರಾಜಕೀಯ ಕಹಿ ಸಮಯದಲ್ಲಿ ಇಂತಹ ನಡವಳಿಕೆಗಳು ಅಪರೂಪ ಎಂದ ಸಂಜಯ್ ರಾವುತ್‌

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಧವ್ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವುತ್ ಅವರಿಗೆ ಸೋಮವಾರ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, 'ರಾಜಕೀಯ ಕಹಿ' ಸಮಯದಲ್ಲಿ ಇಂತಹ ನಡವಳಿಕೆಗಳು ಅಪರೂಪವಾಗುತ್ತಿವೆ ಎಂದು ರಾವುತ್ ಹೇಳಿದ್ದಾರೆ.
ಸಂಜಯ್ ರಾವುತ್-ರಾಹುಲ್ ಗಾಂಧಿ
ಸಂಜಯ್ ರಾವುತ್-ರಾಹುಲ್ ಗಾಂಧಿ

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಧವ್ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವುತ್ ಅವರಿಗೆ ಸೋಮವಾರ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, 'ರಾಜಕೀಯ ಕಹಿ' ಸಮಯದಲ್ಲಿ ಇಂತಹ ನಡವಳಿಕೆಗಳು ಅಪರೂಪವಾಗುತ್ತಿವೆ ಎಂದು ರಾವುತ್ ಹೇಳಿದ್ದಾರೆ.

ಸೆಪ್ಟೆಂಬರ್ 7 ರಿಂದ ನಡೆಯುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಏಕೆಂದರೆ, ಅವರು ಪ್ರೀತಿ ಮತ್ತು ಸಹಾನುಭೂತಿಯ ಮೇಲೆ ಗಮನವನ್ನು ಕೇಂದ್ರೀಕರಿಸುತ್ತಿದ್ದಾರೆ ಎಂದು ರಾವುತ್ ಹೇಳಿದರು.

ಈ ಹಿಂದೆ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ಸಂದರ್ಭ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಸಂಜಯ್ ರಾವುತ್ ಕಿಡಿಕಾರಿದ್ದರು.
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಳೆದ ವಾರ ತಮ್ಮ ಪಕ್ಷವು ಸಾವರ್ಕರ್ ಅವರ ಬಗ್ಗೆ ಅಪಾರ ಗೌರವವನ್ನು ಹೊಂದಿದೆ ಮತ್ತು ದಿವಂಗತ ಹಿಂದುತ್ವ ಸಿದ್ಧಾಂತವಾದಿಯ ಬಗ್ಗೆ ರಾಹುಲ್ ಗಾಂಧಿಯವರ ಟೀಕೆಗಳನ್ನು ಎಂದಿಗೂ ಒಪ್ಪುವುದಿಲ್ಲ ಎಂದು ಹೇಳಿದ್ದರು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಗೆ ಬಂದಿರುವ ರಾವುತ್ ಸೋಮವಾರ ಟ್ವೀಟ್‌ನಲ್ಲಿ, 'ಕೆಲವು ವಿಷಯಗಳ ಬಗ್ಗೆ ಬಲವಾದ ಭಿನ್ನಾಭಿಪ್ರಾಯಗಳಿದ್ದರೂ, ನಿಮ್ಮ ರಾಜಕೀಯ ಸಹೋದ್ಯೋಗಿಯನ್ನು ವಿಚಾರಿಸುವುದು ಮಾನವೀಯತೆಯ ಸಂಕೇತವಾಗಿದೆ! ಭಾರತ್ ಜೋಡೋ ಯಾತ್ರೆಯ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ರಾಹುಲ್ ಗಾಂಧೀಜಿ ನನ್ನ ಆರೋಗ್ಯವನ್ನು ವಿಚಾರಿಸಲು ನಿನ್ನೆ  ಕರೆ ಮಾಡಿದ್ದರು. 'ನಾವು ನಿಮ್ಮ ಆರೋಗ್ಯದ ಬಗ್ಗೆ ಚಿಂತಿತರಾಗಿದ್ದೆವು' ಎಂದು ಅವರು ಹೇಳಿದರು ಎಂದು ರಾವುತ್ ತಿಳಿಸಿದ್ದಾರೆ.

110 ದಿನಗಳನ್ನು ಜೈಲಿನಲ್ಲಿ ಕಳೆದ ರಾಜಕೀಯ ಸಹೋದ್ಯೋಗಿಯ ನೋವನ್ನು ಅನುಭವಿಸಿದ ಅವರ ಸಹಾನುಭೂತಿಯನ್ನು ನಾನು ಪ್ರಶಂಸಿಸುತ್ತೇನೆ. ರಾಜಕೀಯದ ಕಹಿಯ ಕಾಲದಲ್ಲಿ, ಇಂತಹ ನಡವಳಿಕೆಗಳು ಅಪರೂಪವಾಗುತ್ತಿವೆ. ರಾಹುಲ್‌ಜಿ ಅವರು ತಮ್ಮ ಯಾತ್ರೆಯಲ್ಲಿ ಪ್ರೀತಿ ಮತ್ತು ಸಹಾನುಭೂತಿಯ ಮೇಲೆ ಗಮನ ಕೇಂದ್ರೀಕರಿಸುತ್ತಿದ್ದಾರೆ. ಆದ್ದರಿಂದಲೇ ಈ ಯಾತ್ರೆಯು ಭಾರಿ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ ಎಂದು ಅವರು ಹೇಳಿದರು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ರಾವುತ್ ಈ ತಿಂಗಳ ಆರಂಭದಲ್ಲಿ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com