ಮೊರ್ಬಿ ಸೇತುವೆ ಕುಸಿತ; ತನಿಖೆ-ಇತರ ಅಂಶಗಳನ್ನು ನಿಯಮಿತ ಮೇಲ್ವಿಚಾರಣೆಗೆ ಹೈಕೋರ್ಟ್‌ಗೆ 'ಸುಪ್ರೀಂ' ಸೂಚನೆ

140 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಮೊರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತು ಇತರ ಅಂಶಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಗುಜರಾತ್ ಹೈಕೋರ್ಟ್‌ಗೆ ಸೂಚಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: 140 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಮೊರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತು ಇತರ ಅಂಶಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಗುಜರಾತ್ ಹೈಕೋರ್ಟ್‌ಗೆ ಸೂಚಿಸಿದೆ.

ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠವು ಈಗಾಗಲೇ ಘಟನೆಯ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಮತ್ತು ಹಲವಾರು ಆದೇಶಗಳನ್ನು ನೀಡಿರುವುದರಿಂದ, ಇದೀಗ ಅರ್ಜಿಗಳನ್ನು ಆಲಿಸಲಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠ ಹೇಳಿದೆ.

ಆದಾಗ್ಯೂ, ಘಟನೆಯ ಸ್ವತಂತ್ರ ತನಿಖೆ ಮತ್ತು ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಗೌರವಾನ್ವಿತ ಪರಿಹಾರವನ್ನು ನೀಡುವಂತೆ ಕೋರಿ ತಮ್ಮ ಮನವಿಯೊಂದಿಗೆ ಪಿಐಎಲ್ ಅರ್ಜಿದಾರರು ಮತ್ತು ಘಟನೆಯಲ್ಲಿ ತನ್ನ ಇಬ್ಬರು ಸಂಬಂಧಿಕರನ್ನು ಕಳೆದುಕೊಂಡ ಇನ್ನೊಬ್ಬ ದಾವೆದಾರರು ಹೈಕೋರ್ಟ್‌ಗೆ ತೆರಳಲು ಅನುಮತಿ ನೀಡಿತು.

ಅರ್ಜಿದಾರರು ನಂತರ ತನ್ನನ್ನು ಸಂಪರ್ಕಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಕ್ಟೋಬರ್ 30 ರಂದು ಮೊರ್ಬಿಯ ಮಚ್ಚು ನದಿಯ ಮೇಲಿನ ಬ್ರಿಟಿಷ್ ಕಾಲದ ತೂಗು ಸೇತುವೆ ಕುಸಿದು 47 ಮಕ್ಕಳು ಸೇರಿದಂತೆ 140 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com