ಗುಜರಾತ್ ಮತದಾರರಿಗೆ ಒಂದು ದಿನ ವೇತನ ಸಹಿತ ರಜೆ ಘೋಷಿಸಿದ ಮಹಾ ಸರ್ಕಾರ

ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೆಲಸ ಮಾಡುವ ಗುಜರಾತ್‌ನ ಮತದಾರರಿಗೆ ಮಹಾರಾಷ್ಟ್ರ ಸರ್ಕಾರ ಒಂದು ದಿನ ವೇತನ ಸಹಿತ ರಜೆಗೆ ಅನುಮತಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೆಲಸ ಮಾಡುವ ಗುಜರಾತ್‌ನ ಮತದಾರರಿಗೆ ಮಹಾರಾಷ್ಟ್ರ ಸರ್ಕಾರ ಒಂದು ದಿನ ವೇತನ ಸಹಿತ ರಜೆಗೆ ಅನುಮತಿ ನೀಡಿ ಅಧಿಸೂಚನೆ ಹೊರಡಿಸಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜ್ಯ ಕೈಗಾರಿಕೆಗಳು, ಇಂಧನ ಮತ್ತು ಕಾರ್ಮಿಕ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಈ ನಿರ್ಧಾರವು ಎಲ್ಲಾ ಸರ್ಕಾರಿ, ಖಾಸಗಿ, ಅರೆ-ಖಾಸಗಿ ಕಂಪನಿಗಳು, ಸಂಸ್ಥೆಗಳಿಗೆ ಅನ್ವಯಿಸುತ್ತದೆ.

ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿರುವ ಗುಜರಾತ್‌ನ ಮತದಾರರು ನೆರೆಯ ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಒಂದು ದಿನ ವೇತನ ಸಹಿತ ರಜೆ ಪಡೆಯಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

ನಾಸಿಕ್, ಪಾಲ್ಘರ್, ಧುಲೆ ಮತ್ತು ನಂದೂರ್‌ಬಾರ್‌ನಂತಹ ಗಡಿ ಜಿಲ್ಲೆಗಳಲ್ಲಿ ಕೆಲಸ ಮಾಡುವ ಗುಜರಾತ್‌ನ ಮತದಾರರಿಗೆ ಈ ರಿಯಾಯಿತಿ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com