ಭಾರತ್ ಜೋಡೋ ಯಾತ್ರೆ: ನಾಳೆಯಿಂದ 4 ದಿನಗಳ ಕಾಲ ಪ್ರಿಯಾಂಕಾ ಗಾಂಧಿ ಭಾಗಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಈಗ ಮಧ್ಯ ಪ್ರದೇಶ ಪ್ರವೇಶಿಸಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ
ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಈಗ ಮಧ್ಯಪ್ರದೇಶ ಪ್ರವೇಶಿಸಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ಅವರು ಇದೇ ಮೊದಲ ಬಾರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದು, ನಾಳೆಯಿಂದ ನಾಲ್ಕು ದಿನಗಳ ಕಾಲ ತಮ್ಮ ಸಹೋದರ ರಾಹುಲ್ ಗಾಂಧಿಗೆ ಜೊತೆ ಹೆಜ್ಜೆ ಹಾಕಲಿದ್ದಾರೆ.

ಭಾರತ್ ಜೋಡೋ ಯಾತ್ರೆಗೆ ಇಂದು ವಿಶ್ರಾಂತಿ ದಿನವಾಗಿದೆ. ಯಾತ್ರೆ ನಾಳೆ ಮಧ್ಯ ಪ್ರದೇಶ ಪ್ರವೇಶಿಸುತ್ತಿದ್ದು, ಬುರ್ಹಾನ್‌ಪುರ ಬಳಿ ಪ್ರಿಯಾಂಕಾ ಗಾಂಧಿ ಭಾಗವಹಿಸುತ್ತಾರೆ ಮತ್ತು ಅವರು ನಾಲ್ಕು ದಿನಗಳ ಕಾಲ ಯಾತ್ರೆಯಲ್ಲಿ ಪಾಲ್ಗೊಳಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com