ದೆಹಲಿ ಪೊಲೀಸರನ್ನೇಕೆ ಅನುಮಾನಿಸಬೇಕು? ಶ್ರದ್ಧಾ ಕೊಲೆ ಪ್ರಕರಣ ಸಿಬಿಐಗೆ ಬೇಡ..!: ಅರ್ಜಿ ವಜಾಗೊಳಿಸಿದ ಹೈಕೋರ್ಟ್!

ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರನ್ನು ಅನುಮಾನಿಸುವುದು ಸರಿಯಲ್ಲ..ದೆಹಲಿ ಹತ್ಯೆಯ ಸಿಬಿಐ ತನಿಖೆ ಬೇಡ ಎಂದು ದೆಹಲಿ ಹೈಕೋರ್ಟ್ ಈ ಸಂಬಂಧ ದಾಖಲಾಗಿದ್ದ ಅರ್ಜಿಯನ್ನು ಮಂಗಳವಾರ ವಜಾಗೊಳಿಸಿದೆ.
ಪೊಲೀಸರ ವಶದಲ್ಲಿರುವ ಅಫ್ತಾಬ್
ಪೊಲೀಸರ ವಶದಲ್ಲಿರುವ ಅಫ್ತಾಬ್

ನವದೆಹಲಿ: ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರನ್ನು ಅನುಮಾನಿಸುವುದು ಸರಿಯಲ್ಲ..ದೆಹಲಿ ಹತ್ಯೆಯ ಸಿಬಿಐ ತನಿಖೆ ಬೇಡ ಎಂದು ದೆಹಲಿ ಹೈಕೋರ್ಟ್ ಈ ಸಂಬಂಧ ದಾಖಲಾಗಿದ್ದ ಅರ್ಜಿಯನ್ನು ಮಂಗಳವಾರ ವಜಾಗೊಳಿಸಿದೆ.

ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣವನ್ನು ದೆಹಲಿ ಪೊಲೀಸರಿಂದ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಇಂದು ವಜಾಗೊಳಿಸಿದ್ದು, ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋಣಿಯಂ ಪ್ರಸಾದ್ ಅವರ ವಿಭಾಗೀಯ ಪೀಠವು ಅರ್ಜಿ ವಜಾಗೊಳಿಸಿದ್ದು,  ದೆಹಲಿ ಪೊಲೀಸರು ತನಿಖೆ ನಡೆಸುತ್ತಿದೆ ಮತ್ತು ನ್ಯಾಯಾಲಯವು ತನಿಖೆಯನ್ನು ಮೇಲ್ವಿಚಾರಣೆ ಮಾಡುವುದಿಲ್ಲ ಎಂದು ಹೇಳಿದೆ.

ತನಿಖೆ ನಡೆಯುತ್ತಿರುವ ಸ್ಥಳಗಳಲ್ಲಿ ಮಾಧ್ಯಮಗಳು ಮತ್ತು ಸಾರ್ವಜನಿಕರ ಉಪಸ್ಥಿತಿಯು ಸಾಕ್ಷ್ಯಾಧಾರಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ತನಿಖೆಯನ್ನು ಸಿಬಿಐ ವಹಿಸಬೇಕು ಎಂದು ಮನವಿಯಲ್ಲಿ ಆರೋಪಿಸಲಾಗಿತ್ತು. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ದೆಹಲಿ ಪೊಲೀಸರು ಶೇ.80 ರಷ್ಟು ತನಿಖೆ ಪೂರ್ಣಗೊಂಡಿದೆ. ಹಿರಿಯ ಅಧಿಕಾರಿಗಳು ತನಿಖೆಯನ್ನು ನಿರ್ವಹಿಸುತ್ತಿದ್ದಾರೆ ಎಂದು ಹೈಕೋರ್ಟ್‌ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ದೆಹಲಿ ಪೊಲೀಸರ ವಾದಕ್ಕೆ ಮನ್ನಣೆ ನೀಡಿದ್ದು, ಸಿಬಿಐ ಹಸ್ತಾಂತರಿಸುವ ಅರ್ಜಿಯನ್ನು ವಜಾಗೊಳಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com