ಕಾಶ್ಮೀರ: ಎಲ್‌ಪಿಜಿ ಸಿಲಿಂಡರ್‌ಗೆ ಬೆಂಕಿ ತಗುಲಿ ಸ್ಫೋಟ, ತಾಯಿ, ಮಗು ಸಜೀವ ದಹನ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ತಾಯಿ ಮತ್ತು ಅಪ್ರಾಪ್ತ ಮಗ ಸಜೀವ ದಹನವಾಗಿರುವ ಘಟನೆ ಗುರುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published: 24th November 2022 04:00 PM | Last Updated: 24th November 2022 04:00 PM | A+A A-

ಸಾಂದರ್ಭಿಕ ಚಿತ್ರ
ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ತಾಯಿ ಮತ್ತು ಅಪ್ರಾಪ್ತ ಮಗ ಸಜೀವ ದಹನವಾಗಿರುವ ಘಟನೆ ಗುರುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುರನಕೋಟೆ ಉಪವಿಭಾಗದ ಚಂದಿಮಾರ್ಹ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ಹಮೀದಾ ಬೇಗಂ(40) ಮತ್ತು ಅಕಿಬ್ ಅಹ್ಮದ್(4) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: ಡ್ರೋನ್‌ನಿಂದ ಬಿದ್ದ ಐಇಡಿ, ಪಿಸ್ತೂಲ್, 5 ಲಕ್ಷ ರೂ. ನಗದನ್ನು ವಶಪಡಿಸಿಕೊಂಡ ಪೊಲೀಸರು
ಮನೆಯಲ್ಲಿದ್ದ ಮೃತ ಮಹಿಳೆಯ ಪತಿ ಮತ್ತು ಇತರ ಇಬ್ಬರು ಮಕ್ಕಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಘಟನೆಯಲ್ಲಿ ಕನಿಷ್ಠ ಒಂದು ಡಜನ್ ಜಾನುವಾರುಗಳು ಸಹ ಸಾವನ್ನಪ್ಪಿವೆ ಎಂದು ಅವರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಲಾಗಿದ್ದು, ಇದುವರೆಗೆ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಹನ್ನೆರಡು ಸಾಕು ಪ್ರಾಣಿಗಳು ಸಾವನ್ನಪ್ಪಿವೆ ಎಂದು ಸುರನ್‌ಕೋಟೆ ಉಪ ಪೊಲೀಸ್ ವರಿಷ್ಠಾಧಿಕಾರಿ ತನ್ವೀರ್ ಜೀಲಾನಿ ಅವರು ಹೇಳಿದ್ದಾರೆ.