ಗಡಿ ವಿವಾದ: ಕೋರ್ಟ್ ಮೆಟ್ಟಿಲೇರಿ ಇದೀಗ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದ 'ಮಹಾ' ಸಿಎಂ

ಗಡಿ ವಿವಾದದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ತಾನೇ ದಾವೆ ಹೂಡಿರುವ ಮಹಾರಾಷ್ಟ್ರ ಸರ್ಕಾರ ಇದೀಗ ಹೊಸ ವರಸೆ ಶುರು ಮಾಡಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ.
Updated on: 

ಬೆಳಗಾವಿ: ಗಡಿ ವಿವಾದದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ತಾನೇ ದಾವೆ ಹೂಡಿರುವ ಮಹಾರಾಷ್ಟ್ರ ಸರ್ಕಾರ ಇದೀಗ ಹೊಸ ವರಸೆ ಶುರು ಮಾಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು, ಗಡಿ ವಿವಾದ ಮಾತುಕತೆ ಮೂಲಕ ಬಗೆಹರಿಯಬೇಕೆಂಬುದು ನಮ್ಮ ನಿಲುವು ಎಂದು ಹೇಳಿದ್ದಾರೆ.

ಗಡಿ ವಿವಾದ ಕುರಿತು ನಾವು ಈಗಾಗಲೇ ಸಭೆ ನಡೆಸಿದ್ದೇವೆ. ಈ ಹಳೆಯ ವಾದವೇನಿದೆ ಅದು ನ್ಯಾಯಾಲಯದ ಮುಂದಿದೆ. ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಯುತ್ತಿದೆ. ಎರಡೂ ರಾಜ್ಯಗಳ ರಾಜ್ಯಪಾಲರ ಸಭೆಯಾಗಿದೆ. ಕೇಂದ್ರ ಸರ್ಕಾರ ಸಹ ಸಕಾರಾತ್ಮಕ ನಿಲುವು ವ್ಯಕ್ತಪಡಿಸಬೇಕಿದೆ. ವಿವಾದ ಸರ್ವ ಸಮ್ಮತಿಯ ಮೂಲಕ ಬಗೆಹರಿಯಬೇಕೆಂಬುದು ನಮ್ಮ ನಿಲುವಾಗಿದೆ. ಈ ನಿಟ್ಟಿನಲ್ಲಿ ನಾವು ಸಭೆಯನ್ನು ಸಹ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಯೋಜನೆಯ ಲಾಭ ಗಡಿಭಾಗದ ಮರಾಠಿಗರಿಗೆ ಸಿಗುತ್ತಿತ್ತೋ ಅದನ್ನು ಹೆಚ್ಚಿಸಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ಹತ್ತು ಸಾವಿರ ರೂಪಾಯಿಯಿಂದ 20 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಮುಖ್ಯಮಂತ್ರಿ ಧರ್ಮಾದಾಯ ಸಹಾಯ ನಿಧಿ ಯೋಜನೆಯ ಲಾಭ ಬಂದ್ ಆಗಿತ್ತು. ಅದನ್ನೂ ಮತ್ತೆ ಶುರು ಮಾಡಿದ್ದೇವೆ.

ಗಡಿಭಾಗದ ಮರಾಠಿಗರಿಗೆ ಆರೋಗ್ಯ ಸೌಲಭ್ಯ ನೀಡಲು ಮಹಾತ್ಮ ಜ್ಯೋತಿಬಾ ಪುಲೆ ಯೋಜನೆ ನೀಡಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಗಡಿ ಭಾಗದ ಮರಾಠಿಗರಿಗೆ ಮಹಾರಾಷ್ಟ್ರ ಸರ್ಕಾರದಿಂದ ಸಿಗುವ ಯೋಜನೆಗಳ ಲಾಭ ಹೆಚ್ಚಿಸಿದ್ದೇವೆ. ಮತ್ಯಾರೋ ವಾದ ಸೃಷ್ಟಿಸಿ ಮತ್ತಷ್ಟು ಜಟಿಲಗೊಳಿಸಬಾರದು. ನಾವು ಸಭೆ ನಡೆಸಿದಾಗ ಸಾಕಷ್ಟು ಸಲಹೆಗಳು ಬಂದಿವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com