ಒಟ್ಟೊಟ್ಟಿಗೆ ನಡೆದಾಗ ನಮ್ಮ ಹೆಜ್ಜೆಗಳು ಬಲವಾಗಿರುತ್ತವೆ: ಬಿಜೆಪಿ ಭದ್ರಕೋಟೆಯಲ್ಲಿ ರಾಹುಲ್ ಗಾಂಧಿ ಭಾರತ್​ ಜೋಡೋ ಯಾತ್ರೆ!

ಬಿಜೆಪಿಯ ಭದ್ರ ಕೋಟೆ ಮಧ್ಯಪ್ರದೇಶದಲ್ಲಿ ಸಾಗುತ್ತಿರುವ ಭಾರತ್​ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್​ ನಾಯಕ ಹಾಗೂ ವಯನಾಡು ಸಂಸದ ರಾಹುಲ್​ ಗಾಂಧಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಾಥ್​ ನೀಡಿದ್ದಾರೆ.
ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ
ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ

ಖಾಂಡ್ವಾ: ಬಿಜೆಪಿಯ ಭದ್ರ ಕೋಟೆ ಮಧ್ಯಪ್ರದೇಶದಲ್ಲಿ ಸಾಗುತ್ತಿರುವ ಭಾರತ್​ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್​ ನಾಯಕ ಹಾಗೂ ವಯನಾಡು ಸಂಸದ ರಾಹುಲ್​ ಗಾಂಧಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಾಥ್​ ನೀಡಿದ್ದಾರೆ.

ಸೆಪ್ಟೆಂಬರ್​ 7ರಂದು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಆರಂಭವಾದ ಯಾತ್ರೆಯು ಇತ್ತೀಚೆಗಷ್ಟೇ ಮಹಾರಾಷ್ಟ್ರ ಪೂರ್ಣಗೊಳಿಸಿ, ನಿನ್ನೆ (ನ.23) ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಕ್ಕೆ ಎಂಟ್ರಿ ಕೊಟ್ಟಿದೆ.

ಇಂದಿನ ಯಾತ್ರೆಯ ಪ್ರಮುಖ ಆಕರ್ಷಣೀಯ ಎಂದರೆ, ಪ್ರಿಯಾಂಕಾ ಗಾಂಧಿ. ಕರ್ನಾಟಕದ ಯಾತ್ರೆಯ ಸಮಯದಲ್ಲೇ ಪ್ರಿಯಾಂಕಾ, ರಾಹುಲ್​ಗೆ ಜತೆಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ.

ಆದರೆ, ಇಂದು ಯಾತ್ರೆಗೆ ಕೈಜೋಡಿಸಿದ್ದಾರೆ. ಇಂದು ಬೆಳಗ್ಗೆ ಯಾತ್ರೆಯು ಖಾಂಡ್ವಾ ಜಿಲ್ಲೆಯ ಬೊರಂಗಾವ್​ನಿಂದ ಆರಂಭವಾಗಿದ್ದು, ಖಾರ್ಗೋನ್​ಗೆ ಪ್ರವೇಶ ಪಡೆಯುವ ಮುನ್ನ ಸ್ವಾಂತಂತ್ರ್ಯ ಹೋರಾಟಗಾರ ತಾಂತಿಯಾ ಭೀಲ್​ ಜನ್ಮ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಕಾಂಗ್ರೆಸ್‌ನ ಅಧಿಕೃತ ಟ್ವಿಟರ್​ನಲ್ಲಿ ರಾಹುಲ್​ ಮತ್ತು ಪ್ರಿಯಾಂಕಾ ಫೋಟೋವನ್ನು ಹಂಚಿಕೊಂಡಿದ್ದು, ನಾವು ಒಟ್ಟಿಗೆ ನಡೆದಾಗ ನಮ್ಮ ಹೆಜ್ಜೆಗಳು ಬಲವಾಗಿರುತ್ತವೆ ಎಂದು ಬರೆದುಕೊಂಡಿದೆ. ಮಧ್ಯಪ್ರದೇಶದ ಪ್ರಮುಖ ಕಾಂಗ್ರೆಸ್ ನಾಯಕರಾದ ಕಮಲ್ ನಾಥ್ ಮತ್ತು ದಿಗ್ವಿಜಯ ಸಿಂಗ್ ಕೂಡ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಹೋದರಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಮಧ್ಯಪ್ರದೇಶದ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು. ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಮತ್ತು ಅವರ ಮಗ ರೈಹಾನ್ ಕೂಡ ಪಾದಯಾತ್ರೆಯ ಭಾಗವಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com