ಹರಿಯಾಣ: ಹೆತ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಪಾಪಿ ತಂದೆಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ಎರಡು ವರ್ಷಗಳ ಹಿಂದೆ ಸಿರ್ಸಾ ಜಿಲ್ಲೆಯಲ್ಲಿ ತನ್ನ 11 ವರ್ಷದ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಪಾಪಿ ತಂದೆಗೆ ಜಿಲ್ಲಾ ನ್ಯಾಯಾಲಯ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಿರ್ಸಾ(ಹರಿಯಾಣ): ಎರಡು ವರ್ಷಗಳ ಹಿಂದೆ ಸಿರ್ಸಾ ಜಿಲ್ಲೆಯಲ್ಲಿ ತನ್ನ 11 ವರ್ಷದ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಪಾಪಿ ತಂದೆಗೆ ಜಿಲ್ಲಾ ನ್ಯಾಯಾಲಯ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.

ಹೆತ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಸಿರ್ಸಾ ಜಿಲ್ಲೆಯ ಭಂಗು ಗ್ರಾಮದ ನಿವಾಸಿ 56 ವರ್ಷದ ಜಸ್ಪಾಲ್‌ ವಿರುದ್ಧ ಪೋಕ್ಸೊ ಕಾಯ್ದೆಯ ಸೆಕ್ಷನ್ 6 ಮತ್ತು ಐಪಿಸಿಯ ಸೆಕ್ಷನ್ 506 ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಫಾಸ್ಟ್ ಟ್ರ್ಯಾಕ್ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರವೀಣ್ ಕುಮಾರ್ ಅವರು, ಜಸ್ಪಾಲ್‌ಗೆ ಮರಣದಂಡನೆ ಶಿಕ್ಷೆ ಮತ್ತು 50,000 ರೂಪಾಯಿ ದಂಡ ವಿಧಿಸಿದ್ದಾರೆ.

ಅಪ್ರಾಪ್ತ ಬಾಲಕಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಭಂಗು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಜಸ್ಪಾಲ್‌ ವಿರುದ್ಧ ಸೆಪ್ಟೆಂಬರ್ 20 2020 ರಂದು ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಮಗುವಿನ ತಂದೆ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಎಫ್‌ಐಆರ್‌ನ ಪ್ರಕಾರ, ಜಸ್ಪಾಲ್‌ ಕುಡಿದು ಮನೆಗೆ ಬಂದು ತನ್ನ ಹೆಂಡತಿಯ(ಸಂತ್ರಸ್ತ ಬಾಲಕಿಯ ತಾಯಿ) ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿದ್ದಾನೆ. ಅದೇ ದಿನ ರಾತ್ರಿ ಪಾಪಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆ ಎರಡು ಬಾರಿ ಕುಡಿದ ಮತ್ತಿನಲ್ಲಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ತನ್ನ ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com