ಸಂಸತ್ ಚಳಿಗಾಲದ ಅಧಿವೇಶನ: ಡಿಸೆಂಬರ್ 6 ರಂದು ಸರ್ವಪಕ್ಷ ಸಭೆ ಕರೆದ ಪ್ರಹ್ಲಾದ್ ಜೋಶಿ
ಸಂಸತ್ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಅಂದರೆ ಡಿಸೆಂಬರ್ 6 ರಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಲೋಕಸಭೆ ಮತ್ತು ರಾಜ್ಯಸಭೆಯ ನಾಯಕರ ಸರ್ವಪಕ್ಷ ಸಭೆ ಕರೆದಿದ್ದಾರೆ.
Published: 25th November 2022 03:52 PM | Last Updated: 25th November 2022 03:52 PM | A+A A-

ಸಂಸತ್ತು
ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಅಂದರೆ ಡಿಸೆಂಬರ್ 6 ರಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಲೋಕಸಭೆ ಮತ್ತು ರಾಜ್ಯಸಭೆಯ ನಾಯಕರ ಸರ್ವಪಕ್ಷ ಸಭೆ ಕರೆದಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬಹುದಾದ ವಿಷಯಗಳ ಬಗ್ಗೆಯೂ ಅವರು ಸರ್ವಪಕ್ಷ ಸಭೆಯಲ್ಲಿ ಚರ್ಚಿಸಲಿದ್ದಾರೆ.
ಇದನ್ನು ಓದಿ: ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 7 ರಿಂದ ಆರಂಭ
ಸಂಸತ್ತಿನ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರಗಳು ಮತ್ತು ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಲೋಕಸಭೆ/ರಾಜ್ಯಸಭೆಯ ರಾಜಕೀಯ ಪಕ್ಷಗಳ ಪ್ರಮುಖರ ಸಭೆಗೆ ನಿಮ್ಮನ್ನು ಆಹ್ವಾನಿಸಲು ನನಗೆ ಸಂತೋಷವಾಗುತ್ತಿದೆ ಎಂದು ಉಭಯ ಸದನಗಳ ನಾಯಕರಿಗೆ ಬರೆದ ಪತ್ರದಲ್ಲಿ ಜೋಶಿ ಹೇಳಿದ್ದಾರೆ.
ಉಭಯ ಸದನಗಳ "ಸುಗಮ ಕಾರ್ಯನಿರ್ವಹಣೆ" ಯನ್ನು ಖಚಿತಪಡಿಸಿಕೊಳ್ಳಲು ಸಚಿವರು ಪ್ರತಿಪಕ್ಷಗಳ ನಾಯಕರ ಸಹಕಾರವನ್ನು ಕೋರಿದ್ದಾರೆ.
"ಉಭಯ ಸದನಗಳ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ನಾನು ನಿಮ್ಮ ಸಹಕಾರವನ್ನು ಕೇಳಲು ಬಯಸುತ್ತೇನೆ. ಸಭೆಯು ಮಂಗಳವಾರ ಡಿಸೆಂಬರ್ 6, 2022 ರಂದು ಬೆಳಗ್ಗೆ 11.00 ಗಂಟೆಗೆ ಸಂಸತ್ತಿನ ಲೈಬ್ರರಿ ಕಟ್ಟಡ, ಸಂಸತ್ ಭವನದಲ್ಲಿ ನಡೆಯಲಿದೆ" ಎಂದು ಜೋಶಿ ತಿಳಿಸಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 7 ರಿಂದ ಡಿಸೆಂಬರ್ 29 ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರು ಈ ಹಿಂದೆ ಹೇಳಿದ್ದರು.