ಉತ್ತರ ಪ್ರದೇಶ: ವೈದ್ಯರ ಅನುಪಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ರೋಗಿಗೆ ಇಂಜೆಕ್ಷನ್ ಚುಚ್ಚಿದ ಆ್ಯಂಬುಲೆನ್ಸ್ ಚಾಲಕ; ತನಿಖೆಗೆ ಆದೇಶ

ತುರ್ತು ಚಿಕಿತ್ಸೆಗೆ ದಾಖಲಾಗಿದ್ದ ರೋಗಿಯೊಬ್ಬರಿಗೆ ವೈದ್ಯರ ಅನುಪಸ್ಥಿತಿಯಲ್ಲಿ  ಆ್ಯಂಬುಲೆನ್ಸ್ ಚಾಲಕನೇ ಇಂಜೆಕ್ಷನ್ ಚುಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇದೀಗ ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಲ್ಲಿಯಾ: ತುರ್ತು ಚಿಕಿತ್ಸೆಗೆ ದಾಖಲಾಗಿದ್ದ ರೋಗಿಯೊಬ್ಬರಿಗೆ ವೈದ್ಯರ ಅನುಪಸ್ಥಿತಿಯಲ್ಲಿ  ಆ್ಯಂಬುಲೆನ್ಸ್ ಚಾಲಕನೇ ಇಂಜೆಕ್ಷನ್ ಚುಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇದೀಗ ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.

ಉತ್ತರ ಪ್ರದೇಶದ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿರುವ ರೋಗಿಗೆ ಆಂಬ್ಯುಲೆನ್ಸ್ ಚಾಲಕರೊಬ್ಬರು ಇಂಜೆಕ್ಷನ್ ನೀಡುತ್ತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಇದೀಗ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಸ್ಪಷ್ಟನೆ ಕೇಳಿದ್ದಾರೆ.  ಈ ವಿಡಿಯೋ ಗುರುವಾರ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ (ಸಿಎಂಎಸ್) ಡಾ.ದಿವಾಕರ್ ಸಿಂಗ್ ಹೇಳಿದ್ದಾರೆ.

ವಿಡಿಯೋದಲ್ಲಿ ಆಂಬ್ಯುಲೆನ್ಸ್ ಚಾಲಕ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಕೊಠಡಿಯಲ್ಲಿ ರೋಗಿಗೆ ಇಂಜೆಕ್ಷನ್ ನೀಡುತ್ತಿರುವುದನ್ನು ಕಾಣಬಹುದು. ಮೂಲಗಳ ಪ್ರಕಾರ ಈ ಘಟನೆ ಬುಧವಾರ ರಾತ್ರಿ ನಡೆದಿದೆ ಎನ್ನಲಾಗಿದೆ. ಈ ವಿಡಿಯೋ ವೈರಲ್ ಬೆನ್ನಲ್ಲೇ ವಿಷಯದ ಕುರಿತು ಅರಿತ ಅಧಿಕಾರಿಗಳು ತುರ್ತು ಚಿಕಿತ್ಸಾ ಕೊಠಡಿಯ ಪ್ರಭಾರಿ ವೈದ್ಯಾಧಿಕಾರಿ, ವೈದ್ಯರು ಮತ್ತು ಅಲ್ಲಿ ನಿಯೋಜಿಸಲಾದ ಇತರ ವೈದ್ಯಕೀಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಅವರ ತಕ್ಷಣದ ಸ್ಪಷ್ಟೀಕರಣವನ್ನು ಕೋರಿ ನೋಟಿಸ್‌ ನೀಡಿದ್ದಾರೆ. 

ಅಂತೆಯೇ ಈ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡುಬಂದ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಂಗ್ ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com