ಛತ್ತೀಸ್ಗಢದಲ್ಲಿ ಎನ್‌ಕೌಂಟರ್‌: ಮೂವರು ನಕ್ಸಲರ ಹತ್ಯೆ

ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮಹಿಳೆ ಸೇರಿದಂತೆ ಮೂವರು ನಕ್ಸಲರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಿಜಾಪುರ (ಛತ್ತೀಸಗಢ): ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮಹಿಳೆ ಸೇರಿದಂತೆ ಮೂವರು ನಕ್ಸಲರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಮಿರ್‌ತುರ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಪೊಮ್ರಾ ಅರಣ್ಯ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಸುಮಾರು 7.30ಕ್ಕೆ ನಕ್ಸಲರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಐಜಿಪಿ ಸುಂದರ್‌ ರಾಜ್‌ ಪಿ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ ಮುಗಿದ ಬಳಿಕ ಘಟನಾ ಸ್ಥಳದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ನಕ್ಸಲರ ಮೃತದೇಹಗಳು ಸಿಕ್ಕಿವೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಸುಂದರ್‌ ರಾಜ್‌ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com