ಎಲ್ಗರ್ ಪರಿಷತ್ ಪ್ರಕರಣ: ಆನಂದ್ ತೆಲ್ತುಂಬ್ಡೆ ಜೈಲಿನಿಂದ ಬಿಡುಗಡೆ
ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ, ಸಾಮಾಜಿಕ ಹೋರಾಟಗಾರ ಆನಂದ್ ತೆಲ್ತುಂಬ್ಡೆ ಅವರು ಶನಿವಾರ ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.
Published: 26th November 2022 04:11 PM | Last Updated: 26th November 2022 04:11 PM | A+A A-

ಆನಂದ್ ತೆಲ್ತುಂಬ್ಡೆ
ಮುಂಬೈ: ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ, ಸಾಮಾಜಿಕ ಹೋರಾಟಗಾರ ಆನಂದ್ ತೆಲ್ತುಂಬ್ಡೆ ಅವರು ಶನಿವಾರ ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.
ಆನಂದ್ ತೆಲ್ತುಂಬ್ಡೆ ಅವರಿಗೆ ನೀಡಲಾದ ಜಾಮೀನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಮಾರನೇ ದಿನವೇ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಇದನ್ನು ಓದಿ: ಭೀಮಾ ಕೋರೆಗಾಂವ್ ಕೇಸ್: ಆನಂದ್ ತೆಲ್ತುಂಬ್ಡೆ ಜಾಮೀನು ವಿರೋಧಿಸಿ ಎನ್‌ಐಎ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಎಲ್ಗರ್ ಪರಿಷತ್ ಪ್ರಕರಣದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಜೈಲಿನಲ್ಲಿದ್ದ 73 ವರ್ಷದ ತೆಲ್ತುಂಬ್ಡೆ ಅವರು ಇಂದು ಮಧ್ಯಾಹ್ನ 1.15 ರ ಸುಮಾರಿಗೆ ಜೈಲಿನಿಂದ ಹೊರ ಬಂದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತೆಲ್ತುಂಬ್ಡೆಗೆ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಎನ್‌ಐಎ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಅದರಂತೆ ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.