26/11 ಮುಂಬೈ ದಾಳಿ: ಯೋಜನೆ ರೂಪಿಸಿದ ಮಾಸ್ಟರ್ ಮೈಂಡ್‌ಗಳನ್ನು ನ್ಯಾಯಾಂಗದ ಮುಂದೆ ತರಬೇಕು- ಎಸ್ ಜೈಶಂಕರ್

26/11 ಮುಂಬೈ ಭಯೋತ್ಪಾದನಾ ದಾಳಿಯ ಸಂತ್ರಸ್ತರನ್ನು ಶನಿವಾರ ಸ್ಮರಿಸಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು, ಭಯೋತ್ಪಾದನೆಯು ಮಾನವೀಯತೆಗೆ ಬೆದರಿಕೆ ಹಾಕುತ್ತದೆ ಮತ್ತು ದಾಳಿ ಯೋಜನೆ ರೂಪಿಸಿದ ಮಾಸ್ಟರ್ ಮೈಂಡ್‌ಗಳನ್ನು ನ್ಯಾಯಾಂಗದ ಮುಂದೆ ತರಬೇಕಿದೆ ಎಂದು ಹೇಳಿದ್ದಾರೆ.
ಜೈಶಂಕರ್
ಜೈಶಂಕರ್

ನವದೆಹಲಿ: 26/11 ಮುಂಬೈ ಭಯೋತ್ಪಾದನಾ ದಾಳಿಯ ಸಂತ್ರಸ್ತರನ್ನು ಶನಿವಾರ ಸ್ಮರಿಸಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು, ಭಯೋತ್ಪಾದನೆಯು ಮಾನವೀಯತೆಗೆ ಬೆದರಿಕೆ ಹಾಕುತ್ತದೆ ಮತ್ತು ದಾಳಿ ಯೋಜನೆ ರೂಪಿಸಿದ ಮಾಸ್ಟರ್ ಮೈಂಡ್‌ಗಳನ್ನು ನ್ಯಾಯಾಂಗದ ಮುಂದೆ ತರಬೇಕಿದೆ ಎಂದು ಹೇಳಿದ್ದಾರೆ.

ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್‌-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ದಾಳಿ ನಡೆಸಿ ಇಂದಿಗೆ 14 ವರ್ಷಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸಚಿವರು ಟ್ವೀಟ್ ಮಾಡಿದ್ದು, ದಾಳಿಯಲ್ಲಿ ಮಡಿದವರನ್ನು ಸ್ಮರಿಸಿದ್ದಾರೆ.

ಭಯೋತ್ಪಾದನೆಯು ಮಾನವೀಯತೆಗೆ ಬೆದರಿಕೆ ಹಾಕುತ್ತದೆ. 26/11 ರಂದು ಮಡಿದವರ ಸ್ಮರಿಸುವಲ್ಲಿ ಇಡೀ ಜಗತ್ತು ಭಾರತದೊಂದಿಗೆ ಕೈಜೋಡಿಸುತ್ತಿದೆ. ಈ ದಾಳಿಯನ್ನು ಯೋಜಿಸಿದ ಮತ್ತು ಮೇಲ್ವಿಚಾರಣೆ ಮಾಡಿದವರನ್ನು ನ್ಯಾಯದ ಮುಂದೆ ತರಬೇಕು. ನಾವು ಭಯೋತ್ಪಾದನೆಯ ಪ್ರತಿಯೊಬ್ಬ ಸಂತ್ರಸ್ತನಿಗೂ ಋಣಿಯಾಗಿದ್ದೇವೆಂದು ಹೇಳಿದ್ದಾರೆ.

2008 ನವೆಂಬರ್​ 26 ಮುಂಬೈ ನಗರದಲ್ಲಿ ನಡೆಯಬಾರದ ಘೋರ ದುರಂತವೊಂದು ನಡೆದುಹೋಗಿತ್ತು. ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್‌-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ದಾಳಿ ನಡೆಸಿ ಇಂದಿಗೆ 14 ವರ್ಷಗಳು ಕಳೆದಿವೆ.

ಸತತ ಮೂರು ದಿನಗಳ ಕಾಲ ದೇಶದ ಆರ್ಥಿಕ ರಾಜಧಾನಿ ಮುಂಬೈ ಮಹಾನಗರಿ ಉಗ್ರರ ಕಪಿಮುಷ್ಟಿಯಲ್ಲಿ ನಲುಗಿತ್ತು. ಲಷ್ಕರ್‌ ಉಗ್ರ ಸಂಘಟನೆಯ 10 ಉಗ್ರರು ಜನನಿಬಿಡ ಪ್ರದೇಶಗಳಲ್ಲಿ ಜನರ ಮಾರಣಹೋಮವನ್ನೇ ನಡೆಸಿದ್ದರು. ಸಿಕ್ಕ ಸಿಕ್ಕವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

ಸಮುದ್ರ ಮಾರ್ಗದಿಂದ ಬಂದ ಈ ದುಷ್ಕರ್ಮಿಗಳು ತಾಜ್‌ ಮಹಲ್‌ ಹೊಟೇಲ್, ಒಬೇರಾಯ್‌ ಹೊಟೇಲ್‌, ಲಿಯೋಪೋಲ್ಡ್‌ ಕೆಫೆ, ನಾರಿಮನ್‌ ಹೌಸ್‌, ಛತ್ರಪತಿ ಶಿವಾಜಿ ರೈಲ್ವೆ ಟರ್ಮಿನಸ್‌ ಮೊದಲಾದ ಕಡೆ ಮನಬಂದಂತೆ ಬಂದೂಕು ಮತ್ತು ಬಾಂಬಿನ ಮೂಲಕ ದಾಳಿ ನಡೆಸಿದರು. ಒಟ್ಟು ನಾಲ್ಕು ದಿನಗಳ ಕಾಲ ದಾಳಿ ನಡೆಸಿದ್ದರು.

ಈ ದುರ್ಘಟನೆಯಲ್ಲಿ ಆರು ಜನ ಅಮೆರಿಕಾದ ನಾಗರಿಕರು, ಹಲವು ವಿದೇಶೀಯರೂ ಸೇರಿದಂತೆ 166 ಜನರು ಸಾವಿಗೀಡಾಗಿದ್ದರು. 300ಕ್ಕೂ ಅಧಿಕ ಜನರು ಗಾಯಾಳುಗಳಾಗಿದ್ದರು. ಭಾರತದ ಇತಿಹಾಸದಲ್ಲಿ ಕರಾಳ ಅಧ್ಯಾಯ ಆಗಿತ್ತು. ಇಂದಿಗೆ ಆ ಘಟನೆ ನಡೆದು 14 ವರ್ಷಗಳು ಕಳೆದಿವೆ. ಗಾಯ ಮಾಸಿದರೂ, ಗಾಯದ ಗುರುತುಗಳು ಹಾಗೇ ಇವೆ. ಇಂದಿಗೂ ಉಗ್ರರು ತಮ್ಮ ಕ್ರೌರ್ಯ ಮೆರೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com