2023ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ಧೆಲ್ ಫತ್ತಾಹ್ ಎಲ್ -ಸಿಸಿಗೆ ಆಹ್ವಾನ
2023 ಜನವರಿ 26ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಭ್ದೆಲ್ ಫತ್ತಾಹ್ ಎಲ್ -ಸಿಸಿ ಅವರನ್ನು ಆಹ್ವಾನಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ತಿಳಿಸಿದೆ.
Published: 27th November 2022 03:34 PM | Last Updated: 27th November 2022 03:34 PM | A+A A-

ಈಜಿಪ್ಟ್ ಅಧ್ಯಕ್ಷ ಅಬ್ಧೆಲ್ ಫತ್ತಾಹ್ ಎಲ್- ಸಿಸಿ
ನವದೆಹಲಿ: 2023 ಜನವರಿ 26ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಭ್ದೆಲ್ ಫತ್ತಾಹ್ ಎಲ್ -ಸಿಸಿ ಅವರನ್ನು ಆಹ್ವಾನಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ತಿಳಿಸಿದೆ.
ಇದೇ ಮೊದಲ ಬಾರಿಗೆ ಆರಬ್ ರಿಪಬ್ಲಿಕ್ ಆಫ್ ಈಜಿಪ್ಟ್ ನ ಅಧ್ಯಕ್ಷರು ನಮ್ಮ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 16 ರಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರ ಮೂಲಕ ಔಪಚಾರಿಕವಾಗಿ ಸಿಸಿ ಅವರಿಗೆ ಆಹ್ವಾನವನ್ನು ತಲುಪಿಸಿದ್ದಾರೆ.
ಉಭಯ ರಾಷ್ಟ್ರಗಳು ಈ ವರ್ಷ ಸ್ವಾತಂತ್ರ್ಯೋ ಮಹೋತ್ಸವದ ಅಮೃತ ಮಹೋತ್ಸವ ಆಚರಿಸಿದ್ದು, 2022-23ರಲ್ಲಿ ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಗೆ ಈಜಿಪ್ಟ್ ರಾಷ್ಟ್ರವನ್ನು ಕೂಡಾ ಆಹ್ವಾನಿಸಲಾಗಿದೆ.