ಚಿತ್ತೂರು: ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ಹಠಾತ್ ಬೆಂಕಿ! ಪ್ರಯಾಣಿಕರು ಪಾರು
ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ಆಂಧ್ರ ಪ್ರದೇಶದ ಚಿತ್ತೂರು ಬಳಿ ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿದೆ.
Published: 27th November 2022 05:16 PM | Last Updated: 27th November 2022 05:16 PM | A+A A-

ಬೆಂಗಳೂರು-ಹೌರಾ ಎಕ್ಸ್ ಪ್ರೆಸ್ ರೈಲು
ಚಿತ್ತೂರು: ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ಆಂಧ್ರ ಪ್ರದೇಶದ ಚಿತ್ತೂರು ಬಳಿ ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿದೆ.
ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಂದಿಸಿ, ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ವರದಿಗಳು ಹೇಳಿವೆ. ಇನ್ನಷ್ಟು ಮಾಹಿತಿ ತಿಳಿದುಬರಬೇಕಾಗಿದೆ.
Chittoor, Andhra Pradesh | Local police rushed to rescue passengers after a fire broke out in a bogie of the Bangalore - Howrah express train. No casualties have yet been reported. Fire is being doused. Further details awaited pic.twitter.com/gO4XVFxSod
— ANI (@ANI) November 27, 2022