ಜಿಗ್ನೇಶ್ ಮೆವಾನಿ
ಜಿಗ್ನೇಶ್ ಮೆವಾನಿ

ಗುಜರಾತ್ ಚುನಾವಣೆ: 120 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ- ಮೆವಾನಿ

ಬಿಜೆಪಿ ಆಡಳಿತವಿರುವ ಗುಜರಾತ್ ನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆ ದೇಶಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದು ಕಾಂಗ್ರೆಸ್ ಶಾಸಕ ಮತ್ತು ದಲಿತ ನಾಯಕ ಜಿಗ್ನೇಶ್ ಮೆವಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಹಮದಾಬಾದ್: ಬಿಜೆಪಿ ಆಡಳಿತವಿರುವ ಗುಜರಾತ್ ನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆ ದೇಶಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದು ಕಾಂಗ್ರೆಸ್ ಶಾಸಕ ಮತ್ತು ದಲಿತ ನಾಯಕ ಜಿಗ್ನೇಶ್ ಮೆವಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 1 ಮತ್ತು 5 ರಂದು ನಡೆಯಲಿರುವ ಎರಡು ಹಂತಗಳ ಚುನಾವಣೆಯಲ್ಲಿ 182 ಸ್ಥಾನಗಳ ಪೈಕಿ 120 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಅವರು ಸುದ್ದಿಸಂಸ್ಥೆ ಪಿಟಿಐ ಸಂದರ್ಶನದಲ್ಲಿ ತಿಳಿಸಿದ್ದಾರೆ.  ಈ ಚುನಾವಣೆ ನಿರುದ್ಯೋಗ, ಬೆಲೆ ಏರಿಕೆ ಮತ್ತು ನಿರಂಕುಶ ಪ್ರಭುತ್ವದ ವಿರುದ್ಧವಾಗಿದೆ ಎಂದು ಅವರು ಹೇಳಿದರು.

ವದಾಗಂ ಕ್ಷೇತ್ರದಿಂದ ಪುನರ್ ಆಯ್ಕೆ ಬಯಸಿರುವ 41 ವರ್ಷದ ಮೆವಾನಿ, ಈ ಬಾರಿ ಕಾಂಗ್ರೆಸ್ ಟಿಕೆಟ್ ಮೇಲೆ ಚುನಾವಣಾ ಕಣಕ್ಕಿಳಿದಿದ್ದಾರೆ. 2017ರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಸ್ವತಂತ್ರ ಶಾಸಕರಾಗಿ ಆಯ್ಕೆಯಾಗಿದ್ದರು. 

ಈ ಬಾರಿ ಸೈಲೆಂಟ್ ಕ್ರಾಂತಿಯಾಗಲಿದ್ದು, ಜನರ ಮನಸ್ಥಿತಿ ಬದಲಾಗಿದೆ. ಪ್ರಧಾನಿ ಮೋದಿ ಮೊದಲ ರಾಜಕೀಯದಿಂದ ನಿವೃತ್ತಿಯಾಗಬೇಕಿದೆ. ಅವರು ಹೊಸದಾಗಿ ಏನನ್ನೂ ಮಾಡಿಲ್ಲ. ಅವರಿಂದ ಜನರು ಹೆಚ್ಚಿನ ನಿರೀಕ್ಷೆ ಹೊಂದಿಲ್ಲ ಎಂದು ಮೆವಾನಿ ತಿಳಿಸಿದರು. 

Related Stories

No stories found.

Advertisement

X
Kannada Prabha
www.kannadaprabha.com