ಸರ್ಕಾರಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್; ಕೇಂದ್ರ, ರಾಜ್ಯಗಳ ಪ್ರತಿಕ್ರಿಯೆ ಕೇಳಿದ 'ಸುಪ್ರೀಂ'
ದೇಶದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 6 ರಿಂದ 12 ನೇ ತರಗತಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವ ನಿರ್ದೇಶನಗಳನ್ನು ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ಕೇಳಿದೆ.
Published: 28th November 2022 03:43 PM | Last Updated: 28th November 2022 04:56 PM | A+A A-

ಸುಪ್ರೀಂ ಕೋರ್ಟ್
ನವದೆಹಲಿ: ದೇಶದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 6 ರಿಂದ 12 ನೇ ತರಗತಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವ ನಿರ್ದೇಶನಗಳನ್ನು ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ಕೇಳಿದೆ.
ಮಧ್ಯಪ್ರದೇಶದ ಮೂಲದ ವೈದ್ಯರಾದ ಸಾಮಾಜಿಕ ಕಾರ್ಯಕರ್ತೆ ಜಯಾ ಠಾಕೂರ್ ಅವರ ಮನವಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರನ್ನೊಳಗೊಂಡ ಪೀಠವು, ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ: ಸ್ಯಾನಿಟರಿ ಪ್ಯಾಡ್‌ಗಳಲ್ಲಿ ಹೆಚ್ಚಿನ ಪ್ರಮಾಣದ ಹಾನಿಕಾರಕ ರಾಸಾಯನಿಕಗಳು: ಅಧ್ಯಯನ
ಅರ್ಜಿದಾರರು ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಶುಚೀಕರಣ ಮತ್ತು ನೈರ್ಮಲ್ಯದ ಪ್ರಮುಖ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಾಯವನ್ನು ಕೋರಿದೆ.