ಛತ್ತೀಸ್‌ಗಢ: 17 ವರ್ಷದ ಬಾಲಕನಿಂದ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ

ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ತನ್ನ ನೆರೆಹೊರೆಯಲ್ಲಿ ವಾಸಿಸುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಮೆತಾರಾ: ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ತನ್ನ ನೆರೆಹೊರೆಯಲ್ಲಿ ವಾಸಿಸುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸಿಟಿ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಸೋಮವಾರ 17 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಂತ್ರಸ್ತ ಬಾಲಕಿ ಶನಿವಾರ ನಿಗೂಢವಾಗಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆಯ ಬಗ್ಗೆ ತನಿಖೆ ಪ್ರಾರಂಭಿಸಲಾಗಿದೆ ಎಂದು ಕೊತ್ವಾಲಿ ಸ್ಟೇಷನ್ ಹೌಸ್ ಆಫೀಸರ್ ಅಂಬರ್ ಸಿಂಗ್ ಭಾರದ್ವಾಜ್ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ.

ಸ್ಥಳೀಯರನ್ನು ವಿಚಾರಣೆ ನಡೆಸಿದ ನಂತರ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

"ಆರೋಪಿಯು ತನ್ನ ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ವೀಡಿಯೊಗಳನ್ನು ನೋಡುವ ಚಟ ಹೊಂದಿದ್ದನು ಮತ್ತು ಅಶ್ಲೀಲ ವಿಡಿಯೋ ವೀಕ್ಷಿಸಿದ ನಂತರ ಸಂತ್ರಸ್ತ ಬಾಲಕಿಯ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ" ಪೊಲೀಸರಿಗೆ ಬಾಲಕ ತಿಳಿಸಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ.

ಬಾಲಕಿ ತನ್ನ ಮನೆಯವರಿಗೆ ತಿಳಿಸುತ್ತಾಳೆ ಎಂದು ಹೆದರಿದ ಆರೋಪಿ, ಸ್ಕಾರ್ಫ್‌ನಿಂದ ಕತ್ತು ಹಿಸುಕಿ ಆಕೆಯನ್ನು ನೇಣಿಗೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com