ಕುಲಾಧಿಪತಿ ಹುದ್ದೆಯಿಂದ ಕೇರಳ ರಾಜ್ಯಪಾಲರನ್ನು ವಜಾಗೊಳಿಸುವ ಕರಡು ಮಸೂದೆಗೆ ಸಂಪುಟ ಅಸ್ತು

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ತೆಗೆದು ಹಾಕಿ, ಆ ಸ್ಥಾನಕ್ಕೆ ವಿಷಯ ತಜ್ಞರನ್ನು ನೇಮಿಸುವ ಕರಡು ಮಸೂದೆಗೆ ಬುಧವಾರ ಕೇರಳ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ತಿರುವನಂತಪುರಂ: ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ತೆಗೆದು ಹಾಕಿ, ಆ ಸ್ಥಾನಕ್ಕೆ ವಿಷಯ ತಜ್ಞರನ್ನು ನೇಮಿಸುವ ಕರಡು ಮಸೂದೆಗೆ ಬುಧವಾರ ಕೇರಳ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಇಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ,  ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದು ಹಾಕುವ ಕರಡು ಮಸೂದೆಗೆ ಒಪ್ಪಿಗೆ ನೀಡಲಾಗಿದೆ.

ಕುಲಾಧಿಪತಿಗಳ ವಿರುದ್ಧ ಗಂಭೀರ ಆರೋಪಗಳಿದ್ದಲ್ಲಿ ಅವರನ್ನು ಪದಚ್ಯುತಗೊಳಿಸಲು ಮಸೂದೆಯಲ್ಲಿ ಅವಕಾಶವಿದೆ. ಅಂತಹ ಪ್ರಕರಣಗಳಲ್ಲಿ, ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರು ನಡೆಸುವ ತನಿಖೆಯನ್ನು ಆಧರಿಸಿ ಕ್ರಮ ತೆಗೆದುಕೊಳ್ಳಲು ಕರಡು ಮಸೂದೆಯಲ್ಲಿ ಅವಕಾಶ ನೀಡಲಾಗಿದೆ.

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಇತ್ತೀಚಿಗಷ್ಟೇ ತಮ್ಮನ್ನು ಕುಲಾಧಿಪತಿ ಹುದ್ದೆಯಿಂದ ತೆಗೆದುಹಾಕುವ ಸುಗ್ರೀವಾಜ್ಞೆಗೆ ಸಹಿ ಮಾಡದೆ ವಾಪಸ್ ಕಳುಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com