ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಟ್ರಕ್ ಪಲ್ಟಿ; ಕನಿಷ್ಟ ಐವರಿಗೆ ಗಾಯ

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಮುಂಬೈ-ಬೆಂಗಳೂರು ಹೆದ್ದಾರಿಯ ಸೇತುವೆಯ ಬಳಿ ಬುಧವಾರ ಬೆಳಗ್ಗೆ ಟ್ರಕ್ ವೊಂದು ಪಲ್ಟಿ ಹೊಡೆದ ಪರಿಣಾಮ ಕನಿಷ್ಟ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಮುಂಬೈ-ಬೆಂಗಳೂರು ಹೆದ್ದಾರಿಯ ಸೇತುವೆಯ ಬಳಿ ಬುಧವಾರ ಬೆಳಗ್ಗೆ ಟ್ರಕ್ ವೊಂದು ಪಲ್ಟಿ ಹೊಡೆದ ಪರಿಣಾಮ ಕನಿಷ್ಟ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನವಲೆ ಸೇತುವೆಯ ಸಮೀಪವಿರುವ ಭೂಮ್ಕರ್ ಚೌಕ್ ಬಳಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಟ್ರಕ್ ಸತಾರಾ ಕಡೆಯಿಂದ ಬರುತ್ತಿದ್ದಾಗ ಪಲ್ಟಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಾಲ್ಕರಿಂದ ಐದು ಜನರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿನ್ಹಗಡ್ ರೋಡ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಯಂತ್ ರಾಜೂರ್ಕರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com