ಎನ್‌ಸಿಪಿ ನಾಯಕ ನವಾಬ್ ಮಲಿಕ್‌ಗೆ ಜಾಮೀನು ನಿರಾಕರಿಸಿದ ಕೋರ್ಟ್
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರ ಜಾಮೀನು ಅರ್ಜಿಯನ್ನು...
Published: 30th November 2022 06:24 PM | Last Updated: 30th November 2022 08:43 PM | A+A A-

ನವಾಬ್ ಮಲಿಕ್
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರ ಜಾಮೀನು ಅರ್ಜಿಯನ್ನು ಮುಂಬೈ ವಿಶೇಷ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.
ಮಲಿಕ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಆರ್ ಎನ್ ರೋಕಡೆ ಅವರು, ಆರೋಪಿಗೆ ಜಾಮೀನು ನಿರಾಕರಿಸಿದ್ದಾರೆ.
ಎರಡೂ ಕಡೆಯ ಸುದೀರ್ಘ ವಾದಗಳನ್ನು ಆಲಿಸಿದ ನಂತರ ವಿಶೇಷ ನ್ಯಾಯಾಲಯವು ನವೆಂಬರ್ 14 ರಂದು ಮಲಿಕ್ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಅರ್ಜಿ ವಜಾಗೊಳಿಸಿ ತೀರ್ಪು ನೀಡಿದೆ.
ಇದನ್ನು ಓದಿ: ರಾಜ್ಯಸಭಾ ಚುನಾವಣೆ: ಮತ ಚಲಾಯಿಸಲು ಜೈಲಿನಿಂದ ತಾತ್ಕಾಲಿಕ ಬಿಡುಗಡೆಗೆ ನವಾಬ್ ಮಲಿಕ್ ಅರ್ಜಿ, ಹೈಕೋರ್ಟ್ ನಕಾರ
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಈ ವರ್ಷದ ಫೆಬ್ರವರಿಯಲ್ಲಿ ಎನ್‌ಸಿಪಿ ನಾಯಕ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಮಲಿಕ್ ನ್ಯಾಯಾಂಗ ಬಂಧನದಲ್ಲಿದ್ದು, ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.