ಕಾಂಗ್ರೆಸ್ ನೂತನ ಅಧ್ಯಕ್ಷರು ಗಾಂಧಿ ಕುಟುಂಬದ ಕೈಗೊಂಬೆಯಾಗ್ತಾರೆ: ಬಿಜೆಪಿ

ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಶನಿವಾರ ವಾಗ್ದಾಳಿ ನಡೆಸಿರುವ ಹಿರಿಯ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ, ಯಾರೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದರೂ ಗಾಂಧಿ ಕುಟುಂಬದ ಕೈಗೊಂಬೆಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಶನಿವಾರ ವಾಗ್ದಾಳಿ ನಡೆಸಿರುವ ಹಿರಿಯ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ, ಯಾರೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದರೂ ಗಾಂಧಿ ಕುಟುಂಬದ ಕೈಗೊಂಬೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅಥವಾ ಬೇರೆ ಯಾರೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದರೂ ವಾಸ್ತವವಾಗಿ ನಿರ್ಧಾರಗಳನ್ನು ಗಾಂಧಿ ಕುಟುಂಬ ತೆಗೆದುಕೊಳ್ಳುವುದರಿಂದ ಅವರ ಕೈ ಗೊಂಬೆಯಾಗಲಿದ್ದಾರೆ ಎಂದು ಅವರು ಟೀಕಿಸಿದ್ದಾರೆ. 

ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಚುನಾವಣಾ ಪ್ರಣಾಳಿಕೆ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಭಾಗಗಳನ್ನು ಬಿಟ್ಟ ಭಾರತದ ವಿಕೃತ ನಕ್ಷೆಯನ್ನು ತೋರಿಸಿದೆ. ಇದು ತಪ್ಪಾಗಲಾರದು,  ಭಾರತದ ಭೂಪಟದಿಂದ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ನ್ನು ಶಶಿ ತರೂರ್ ತೆಗೆದುಹಾಕಿರುವುದು ಅಕ್ಷಮ್ಯ, ಇದು ತರೂರ್ ಮತ್ತು ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ.  

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಶುಕ್ರವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಒಟ್ಟು ಮೂವರು ನಾಯಕರು ಅಧ್ಯಕ್ಷ ಸ್ಥಾನಕ್ಕೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಖರ್ಗೆ ಗಾಂಧಿ ಕುಟುಂಬದ ನಿಷ್ಠರು. ಅದರಲ್ಲೂ ರಾಹುಲ್ ಗಾಂಧಿ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಖರ್ಗೆ ಪಕ್ಷದ ಅಧ್ಯಕ್ಷರಾದರೆ ಎಸ್ ನಿಜಲಿಂಗಪ್ಪ (1968-69) ಕರ್ನಾಟಕದ ಮತ್ತೋರ್ವ ಹಿರಿಯ ರಾಜಕಾರಣಿಯೊಬ್ಬರು ಪಕ್ಷದ ಉನ್ನತ ಸ್ಥಾನವನ್ನು ಅಲಂಕರಿಸಿದ ಕೀರ್ತಿಗೆ ಭಾಜನರಾಗಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com