ರಾಜ್ಯಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್, ಪಿ. ಚಿದಂಬರಂ ನಡುವೆ ಪೈಪೋಟಿ?
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶನಿವಾರ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್ ಮತ್ತು ಪಿ. ಚಿದಂಬರಂ ಅವರ ಹೆಸರು ಮುನ್ನೆಲೆಗೆ ಬಂದಿದೆ.
Published: 01st October 2022 05:27 PM | Last Updated: 01st October 2022 05:34 PM | A+A A-

ಪಿ.ಚಿದಂಬರಂ, ದಿಗ್ವಿಜಯ್ ಸಿಂಗ್
ನವದೆಹಲಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶನಿವಾರ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್ ಮತ್ತು ಪಿ. ಚಿದಂಬರಂ ಅವರ ಹೆಸರು ಮುನ್ನೆಲೆಗೆ ಬಂದಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಕಂಡು ಬಂದಿದೆ.
ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ
80 ವರ್ಷ ವಯಸ್ಸಿನ ನಾಯಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಖರ್ಗೆ ಅವರು ಕಳುಹಿಸಿದ ರಾಜೀನಾಮೆಯು ಮೇ ತಿಂಗಳಲ್ಲಿ ಉದಯಪುರದ ‘ಚಿಂತನ್ ಶಿವರ್’ ನಲ್ಲಿ ಘೋಷಿಸಲಾದ ಪಕ್ಷದ ಘೋಷಿತ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ತತ್ವಕ್ಕೆ ಅನುಗುಣವಾಗಿದೆ.