ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ 3,375 ಹೊಸ ಪ್ರಕರಣ, 18 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,375 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,94,487 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,375 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,94,487 ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37,444 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 11 ಸಾವು ಸೇರಿದಂತೆ 18 ಮಂದಿ ಸಾವಿಗೀಡಾಗಿದ್ದು, ಈವರೆಗೆ 5,28,673 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.08ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.73ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಸದ್ಯ ದೇಶದಲ್ಲಿ ಈವರೆಗೆ 4,40,28,370 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದು, ದೈನಂದಿನ ಪಾಸಿಟಿವಿ ದರ ಶೇ 1.28ರಷ್ಟಿದೆ, ಮರಣ ಪ್ರಮಾಣ ಶೇ 1.19 ರಷ್ಟಿದೆ.

ದೇಶದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 218.75 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com