ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಭಯೋತ್ಪಾದಕ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉಗ್ರನನ್ನು ಶೋಪಿಯಾನ್‌ನ ನೌಪೋರಾ ಪ್ರದೇಶದ ನಸೀರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಬಾಸ್ಕುಚಾನ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ನಿರ್ದಿಷ್ಟ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಆ ಪ್ರದೇಶದಲ್ಲಿ ಸುತ್ತುವರಿದಿದ್ದರು ಮತ್ತು ಶೋಧ ಕಾರ್ಯಾಚರಣೆ ಕೈಗೊಂಡಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಪಡೆಗಳು ಶೋಧ ನಡೆಸುತ್ತಿದ್ದಂತೆಯೇ ಭಯೋತ್ಪಾದಕರು ಏಕಾಏಕಿ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿ ಮತ್ತು ಎನ್‌ಕೌಂಟರ್‌ನಲ್ಲಿ ಸ್ಥಳೀಯ ಎಲ್‌ಇಟಿ ಉಗ್ರನ ಹತ್ಯೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್, ಹತ್ಯೆಯಾದ ಭಯೋತ್ಪಾದಕ ಹಲವಾರು ಉಗ್ರ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ಇತ್ತೀಚೆಗೆ ನಡೆದ ಎನ್‌ಕೌಂಟರ್‌ ಪ್ರದೇಶದಿಂದ ತಪ್ಪಿಸಿಕೊಂಡಿದ್ದ ಎಂದಿದ್ದಾರೆ.

'ಹತ್ಯೆಗೀಡಾದ ಭಯೋತ್ಪಾದಕನನ್ನು ಶೋಪಿಯಾನ್‌ನ ನೌಪೋರಾ ಪ್ರದೇಶದ ನಸೀರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಈತ ಎಲ್ಇಟಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ. ಎಕೆ ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಂಗ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com