ಪಾಲ್ಘರ್: ಒಂಬತ್ತು ವರ್ಷಗಳ ಹಿಂದೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಆಕೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ 29 ವರ್ಷದ ಆರೋಪಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಆರೋಪಿ, ಸುಲ್ತಾನ್ ಅಲಿಯಾಸ್ ರಾಜಾ ನೂರ್ ಮೊಹಮ್ಮದ್ ಶೇಖ್, 2013ರ ಫೆಬ್ರವರಿಯಲ್ಲಿ 19 ವರ್ಷದ ಮಹಿಳೆಗೆ ಮತ್ತು ಬರುವ ಔಷಧಿ ಬೆರೆಸಿದ ಪಾನೀಯವನ್ನು ನೀಡಿ ವಿವಿಧ ಸಂದರ್ಭಗಳಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಮೀರಾ ಭಯಂದರ್-ವಸಾಯಿ ವಿರಾರ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಪ್ರಮೋದ್ ಬಡಾಖ್ ಹೇಳಿದ್ದಾರೆ.
ಸಂತ್ರಸ್ತೆ ಗರ್ಭಿಣಿಯಾಗಿದ್ದಳು. ಆದರೆ, ಈ ಬಗ್ಗೆ ಯಾರಿಗೂ ತಿಳಿಸದಂತೆ ಆರೋಪಿಯು ಕೇಳಿಕೊಂಡಿದ್ದಾನೆ. ಇಲ್ಲದಿದ್ದರೆ ಆಕೆಯ ಆಕ್ಷೇಪಾರ್ಹ ವಿಡಿಯೋ ಕ್ಲಿಪ್ ಅನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾನೆ. ಆರೋಪಿ ಸಂತ್ರಸ್ತೆಯನ್ನು ಥಳಿಸಿ ನಿಂದಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
2013ರ ಏಪ್ರಿಲ್ 22ರಂದು ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪಾಲ್ಘರ್‌ನ ನಲ್ಲಸೊಪಾರ ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ, ಬೆದರಿಕೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಿಸಿದ್ದರು.
ಪೊಲೀಸ್ ಅಪರಾಧ ಘಟಕದ ತಂಡವು, ತಮಗೆ ಸಿಕ್ಕ ಖಚಿತ ಮಾಹಿತಿಯನ್ನು ಆಧರಿಸಿ ನಲ್ಲಸೊಪಾರ ಪ್ರದೇಶದಲ್ಲಿ ಆರೋಪಿಯನ್ನು ಶನಿವಾರ ಬಂಧಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವಿಚಾರಣೆ ವೇಳೆ ಆರೋಪಿ ಬಂಧನದಿಂದ ತಪ್ಪಿಸಿಕೊಳ್ಳಲು ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾನೆ.
Advertisement