ಪುಲ್ವಾಮಾದಲ್ಲಿ ಉಗ್ರ ದಾಳಿ: ಓರ್ವ ಪೋಲೀಸ್ ಹುತಾತ್ಮ, ಸಿಆರ್ ಪಿಎಫ್ ಯೋಧನಿಗೆ ಗಾಯ

ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡದ ಮೇಲೆ ಭಾನುವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಕರ್ತವ್ಯದಲ್ಲಿದ್ದ  ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪುಲ್ವಾಮಾ: ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡದ ಮೇಲೆ ಭಾನುವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಕರ್ತವ್ಯದಲ್ಲಿದ್ದ  ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ.

ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದಿದ್ದು,  ಭದ್ರತಾ ಪಡೆಗಳಿಗೆ ಸಹಾಯ ಮಾಡಲು ಹೆಚ್ಚಿನ ಪಡೆ ಕಳುಹಿಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಪುಲ್ವಾಮಾದ ಪಿಂಗ್ಲಾನಾದಲ್ಲಿ ಸಿಆರ್‌ಪಿಎಫ್ ಮತ್ತು ಪೊಲೀಸರ ಜಂಟಿ ನಾಕಾಬಂಧಿ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಈ ಭಯೋತ್ಪಾದಕ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು, ಓರ್ವ ಸಿಆರ್ ಪಿಎಫ್  ಸಿಬ್ಬಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಹೆಚ್ಚಿನ ಸಿಬ್ಬಂದಿಯನ್ನು ಕಳುಹಿಸಲಾಗಿದೆ. ಪ್ರದೇಶವನ್ನು ಸುತ್ತುವರಿಯಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಿ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೋಯಿಬಾ (ಎಲ್‌ಇಟಿ) ಗೆ ಸಂಬಂಧಿಸಿದ ಭಯೋತ್ಪಾದಕನನ್ನು ಗುಂಡಿಕ್ಕಿ ಕೊಂದ ಕೆಲವೇ ಗಂಟೆಗಳ ನಂತರ ಈ ಘಟನೆ ನಡೆದಿದೆ. 

ಹತ್ಯೆಯಾದ ಭಯೋತ್ಪಾದಕನನ್ನು ನಸೀರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಇತ್ತೀಚೆಗೆ ಎನ್‌ಕೌಂಟರ್‌ನಿಂದ ತಪ್ಪಿಸಿಕೊಂಡಿದ್ದ ಎಂದು ಹೇಳಲಾಗಿದೆ. ಈತ ಹಲವಾರು ಭಯೋತ್ಪಾದಕ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಎಂದು ಕಾಶ್ಮೀರದ ಎಡಿಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.

ಶೋಧ ಕಾರ್ಯಾಚರಣೆಯ ಸಮಯದಲ್ಲಿ ಘಟನಾ ಪ್ರದೇಶದಲ್ಲಿ ಎಕೆ ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಜೊತೆ ನಂಟು ಹೊಂದಿದ್ದ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com