ಐಸಿಯು ನಲ್ಲಿ ಮುಲಾಯಂ ಸಿಂಗ್ ಯಾದವ್ ಗೆ ಚಿಕಿತ್ಸೆ: ಆರೋಗ್ಯದ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಗುರ್‌ಗಾಂವ್‌ನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು)  ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷವು ಟ್ವೀಟ್ ಮಾಡಿ ತಿಳಿಸಿದೆ.
ಮುಲಾಯಂ ಸಿಂಗ್ ಯಾದವ್
ಮುಲಾಯಂ ಸಿಂಗ್ ಯಾದವ್

ಗುರ್‌ಗಾಂವ್: ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಗುರ್‌ಗಾಂವ್‌ನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು)  ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷವು ಟ್ವೀಟ್ ಮಾಡಿ ತಿಳಿಸಿದೆ.

ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆಯಲು ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಮುಲಾಯಂ ಪುತ್ರ ಅಖಿಲೇಶ್ ಯಾದವ್ ಅವರಗೆ ಪ್ರಧಾನಿ ಮೋದಿ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ. ಸಾಧ್ಯವಿರುವ ಯಾವುದೇ ನೆರವು ಬೇಕಿದ್ದರೂ, ಅವರು ಸಹಾಯ ಮಾಡಲು ಇದ್ದಾರೆ ಎಂದು ಮೋದಿ ಹೇಳಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ "ಗಂಭೀರ"ವಾಗಿದ್ದು, ಅವರನ್ನು ಹರಿಯಾಣದ ಗುರುಗ್ರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿದೆ

ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವಾರು ನಾಯಕರು ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ರಾಜಕಾರಣಿ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯದ ಬಗ್ಗೆ ಕಾಲಕಾಲಕ್ಕೆ ಮಾಹಿತಿಯನ್ನು ನೀಡಲಾಗುವುದು ಎಂದು ಸಮಾಜವಾದಿ ಪಕ್ಷವು ನಂತರ ಟ್ವೀಟ್‌ನಲ್ಲಿ ತಿಳಿಸಿದೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ 82 ವರ್ಷದ ಮುಲಾಯಂ ಸಿಂಗ್ ಅವರು ಆಗಸ್ಟ್ 22 ರಿಂದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಂಕೊಲಾಜಿಸ್ಟ್‌ಗಳಾದ ಡಾ. ನಿತಿನ್ ಸೂದ್ ಮತ್ತು ಡಾ. ಸುಶೀಲ್ ಕಟಾರಿಯಾ ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com